Indian Coast Guard Recruitment 2023: ಕರಾವಳಿ ಭದ್ರತಾ ಪಡೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

| Updated By: ಝಾಹಿರ್ ಯೂಸುಫ್

Updated on: Jan 23, 2023 | 8:38 AM

Indian Coast Guard Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಕೋಸ್ಟ್​ ಗಾರ್ಡ್ (Indian Coast Guard)​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Indian Coast Guard Recruitment 2023: ಕರಾವಳಿ ಭದ್ರತಾ ಪಡೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
Indian Coast Guard Recruitment 2023
Follow us on

Indian Coast Guard Recruitment 2023: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿರುವ ಖಾಲಿ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 71 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಕೋಸ್ಟ್​ ಗಾರ್ಡ್ (Indian Coast Guard)​ನ ಅಧಿಕೃತ ವೆಬ್​ಸೈಟ್ joinindiancoastguard.cdac.in ​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಜನರಲ್ ಡ್ಯೂಟಿ (GD)- 40 ಹುದ್ದೆಗಳು
  • ಕಮರ್ಷಿಯಲ್ ಪೈಲಟ್​ ಲೈಸೆನ್ಸ್​ (SSA)- 10 ಹುದ್ದೆಗಳು
  • ಟೆಕ್ನಿಕಲ್ (ಮೆಕ್ಯಾನಿಕಲ್)- 6 ಹುದ್ದೆಗಳು
  • ಟೆಕ್ನಿಕಲ್ (ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್​)- 4 ಹುದ್ದೆಗಳು
  • ಲಾ ಎಂಟ್ರಿ- 1 ಹುದ್ದೆ

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
  • ಜನರಲ್ ಡ್ಯೂಟಿ (GD): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪದವಿ ಪೂರ್ಣಗೊಳಿಸಿರಬೇಕು.
  • ಕಮರ್ಷಿಯಲ್ ಪೈಲಟ್​ ಲೈಸೆನ್ಸ್​ (SSA): ಈ ಹುದ್ದೆಗಳಿಗೆ ಪಿಯುಸಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಟೆಕ್ನಿಕಲ್ (ಮೆಕ್ಯಾನಿಕಲ್): ನೇವಲ್ ಆರ್ಕಿಟೆಕ್ಚರ್/ಮೆಕ್ಯಾನಿಕಲ್/ಮೆರೈನ್/ಆಟೋಮೋಟಿವ್ ಮೆಕಾಟ್ರಾನಿಕ್ಸ್/
  • ಏರೋನಾಟಿಕಲ್/ಏರೋಸ್ಪೇಸ್​ ಈ ವಿಭಾಗಗಳಲ್ಲಿ ಇಂಜಿನಿಯರಿಂಗ್ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಟೆಕ್ನಿಕಲ್ (ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್​): ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್/ಇನ್‌ಸ್ಟ್ರುಮೆಂಟೇಶನ್/ಇನ್‌ಸ್ಟ್ರುಮೆಂಟೇಶನ್ ಅ್ಯಂಡ್ ಕಂಟ್ರೋಲ್/ಎಲೆಕ್ಟ್ರಾನಿಕ್ಸ್ ಅ್ಯಂಡ್ ಕಮ್ಯುನಿಕೇಶನ್/ಪವರ್ ಇಂಜಿನಿಯರಿಂಗ್/ಪವರ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್​ನಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಹಾಕಬಹುದು.
  • ಲಾ ಎಂಟ್ರಿ: ಎಲ್​ಎಲ್​ಬಿ ಹಾಗೂ ಕಾನೂನು ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

  • ಜನರಲ್ ಡ್ಯೂಟಿ (GD)- ಜುಲೈ 1, 1998 ರಿಂದ ಜೂನ್​ 30, 2002ರೊಳಗೆ ಜನಿಸಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಕಮರ್ಷಿಯಲ್ ಪೈಲಟ್​ ಲೈಸೆನ್ಸ್​ (SSA)- ಜುಲೈ 1, 1998 ರಿಂದ ಜೂನ್​​ 30, 2004 ರೊಳಗೆ ಜನಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಟೆಕ್ನಿಕಲ್ (ಮೆಕ್ಯಾನಿಕಲ್)- ಜುಲೈ 1, 1998 ರಿಂದ ಜೂನ್​ 30, 2002 ರೊಳಗೆ ಜನಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಟೆಕ್ನಿಕಲ್ (ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್​)- ಜುಲೈ 1, 1998 ರಿಂದ ಜೂನ್​ 30, 2002 ರೊಳಗೆ ಜನಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಲಾ ಎಂಟ್ರಿ- ಜುಲೈ 1, 1994 ರಿಂದ ಜೂನ್​ 30, 2002 ರೊಳಗೆ ಜನಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

ಜನರಲ್​ ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಇನ್ನುಳಿದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ.

Also Read: LIC Recruitment 2023: ಎಲ್​ಐಸಿ ಉದ್ಯೋಗಾವಕಾಶ: ಪದವೀಧರರು ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 9, 2023

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.