Indian Recruitment 2025: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯು 10+2 (ಬಿ.ಟೆಕ್) ಕೆಡೆಟ್ ಎಂಟ್ರಿ ಸ್ಕೀಮ್ ಮೂಲಕ 44 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಜನವರಿ 19 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಮೆರಿಟ್ ಮತ್ತು ಎಸ್‌ಎಸ್‌ಬಿ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಭಾರತೀಯ ನೌಕಾಪಡೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.

Indian Recruitment 2025: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ನೌಕಾಪಡೆ ನೇಮಕಾತಿ

Updated on: Jan 02, 2026 | 5:12 PM

ಭಾರತೀಯ ನೌಕಾಪಡೆಯು ಅಧಿಕೃತ ಅಧಿಸೂಚನೆಯ ಮೂಲಕ 10+2 (ಬಿ.ಟೆಕ್) 44 ಕೆಡೆಟ್ ಎಂಟ್ರಿ ಸ್ಕೀಮ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ನೌಕಾಪಡೆಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 19ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

ಶೈಕ್ಷಣಿಕ ಅರ್ಹತೆ:

ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಪೂರ್ಣಗೊಳಿಸಿರಬೇಕು .

ಆಯ್ಕೆ ಪ್ರಕ್ರಿಯೆ:

ಮೆರಿಟ್ ಪಟ್ಟಿ ಮತ್ತು SSB ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ ಭಾರತೀಯ ನೌಕಾಪಡೆಯ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಭಾರತೀಯ ನೌಕಾಪಡೆಯ 10+2 (ಬಿ.ಟೆಕ್) ಕೆಡೆಟ್ ಎಂಟ್ರಿ ಸ್ಕೀಮ್​​ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಭಾರತೀಯ ನೌಕಾಪಡೆಯ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ