Indian Navy Recruitment 2022: 10ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿ ಉದ್ಯೋಗ: ವೇತನ 30 ಸಾವಿರ ರೂ.
Indian Navy Agniveer MR Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Indian Navy Agniveer MR Recruitment 2022: ಭಾರತೀಯ ಸೇನೆಯ ನೌಕಾಪಡೆಯು ಅಗ್ನಿಪಥ್ ಯೋಜನೆಯಡಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇಂಡಿಯನ್ ನೆವಿ ಅಗ್ನಿವೀರ್ ಎಂಆರ್ ನೇಮಕಾತಿಯ ಅರ್ಜಿ ಪ್ರಕ್ರಿಯೆಯು ಇಂದಿನಿಂದ ಶುರುವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಈ ನೇಮಕಾತಿ ಅಡಿಯಲ್ಲಿ ಒಟ್ಟು 200 ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ.
ವಿದ್ಯಾರ್ಹತೆ: ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಗಳಿಂದ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಹೀಗೆ ಪಾಸಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವಾಗಿ ರೂ. 30,000/- ನೀಡಲಾಗುತ್ತದೆ. ವಯೋಮಿತಿ: 01 ಡಿಸೆಂಬರ್ 1999 ರಿಂದ 31 ಮೇ 2000 ರ ನಡುವೆ ಜನಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು joinindiannavy.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ: ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಜುಲೈ 30, 2022
ಆಯ್ಕೆ ಪ್ರಕ್ರಿಯೆ: ಈ ನೇಮಕಾತಿಯ ಆಯ್ಕೆಯು ಶಾರ್ಟ್‌ಲೀಸ್ಟಿಂಗ್, ಲಿಖಿತ ಪರೀಕ್ಷೆಯನ್ನು ಆಧರಿಸಿರುತ್ತದೆ. ಹಾಗೆಯೇ ಅರ್ಹತಾ ದೈಹಿಕ ಸಾಮರ್ಥ್ಯ ಪರೀಕ್ಷೆ (PFT) ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.