Indian Navy Agniveer Recruitment 2022: ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ನೌಕಾಪಡೆಯ ಅಗ್ನಿವೀರ್ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ನೇಮಕಾತಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಮೂಲಕ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಗ್ನಿವೀರ್ ಎಸ್‌ಎಸ್‌ಆರ್ ಮತ್ತು ಅಗ್ನಿವೀರ್ ಎಂಆರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದಕ್ಕೆ ಬೇಕಾದ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಕೆಳಗೆ ಹಂಚಿಕೊಳ್ಳಲಾಗಿದೆ.
ಶೈಕ್ಷಣಿಕ ಅರ್ಹತೆ:
ನೌಕಾಪಡೆಯ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, 12ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಅಭ್ಯರ್ಥಿಗಳು ರಸಾಯನಶಾಸ್ತ್ರಜ್ಞ, ಜೀವಶಾಸ್ತ್ರ ಅಥವಾ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಅಭ್ಯಸಿರುವ ಅರ್ಹತೆಯ ಮೇಲೆ ಎಸ್‌ಎಸ್‌ಆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು MR ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ:
ನೌಕಾಪಡೆಯ ಎಸ್‌ಎಸ್‌ಆರ್ ಮತ್ತು ಎಂಆರ್ ಹುದ್ದೆಗಳಿಗೆ 17 ವರೆ ವರ್ಷದಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ವರ್ಷಕ್ಕೆ ಮಾತ್ರ ಗರಿಷ್ಠ ವಯೋಮಿತಿಯನ್ನು 23 ವರ್ಷಗಳಿಗೆ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಇದು 21 ವರ್ಷಗಳವರೆಗಿನ ಅಭ್ಯರ್ಥಿಗಳಿಗೆ ಸೀಮಿತವಾಗಿರಲಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಆಯ್ಕೆಗಾಗಿ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಯಶಸ್ವಿಯಾದ ನಂತರ, ಅಭ್ಯರ್ಥಿಗಳು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಈ ಎರಡೂ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ನೋಂದಣಿ ಮಾಡಿಕೊಳ್ಳುವುದು ಹೇಗೆ?
ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.