Indian Navy Agniveer SSR Recruitment 2022: ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಡಿ ನೌಕಾಪಡೆಯ ಅಗ್ನಿವೀರ್ ಎಸ್ಎಸ್ಆರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು 15 ಜುಲೈ 2022 ರಿಂದ ಅರ್ಜಿಗಳನ್ನು ಸಲ್ಲಿಸಬಹುದು. ಒಟ್ಟು 2800 ಹುದ್ದೆಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 2800
ಶೈಕ್ಷಣಿಕ ಅರ್ಹತೆ:
12ನೇ ತರಗತಿಯಲ್ಲಿ (ಗಣಿತ, ಭೌತಶಾಸ್ತ್ರ) ಪಾಸಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಜನ್ಮ ದಿನಾಂಕ 1ನೇ ನವೆಂಬರ್ 1999 ರಿಂದ 30ನೇ ಏಪ್ರಿಲ್ 2005 ರ ನಡುವೆ ಇರಬೇಕು.
ದೈಹಿಕ ಅರ್ಹತೆ:
ಅಭ್ಯರ್ಥಿಯ ಕನಿಷ್ಠ ಎತ್ತರ 157 ಸೆಂ.ಮೀ ಆಗಿರಬೇಕು. ವಿವರವಾದ ದೈಹಿಕ ಅರ್ಹತೆಯ ಅಧಿಸೂಚನೆ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಪ್ರಮುಖ ದಿನಾಂಕ:
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.