Indian Navy MR Recruitment 2022: SSLC ಪಾಸಾದವರಿಗೆ ನಾಕೌಪಡೆಯಲ್ಲಿ ಉದ್ಯೋಗಾವಕಾಶ: ವೇತನ 30 ಸಾವಿರ ರೂ.

Indian Navy MR Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೌಕಾಪಡೆಯ ಅಧಿಕೃತ ವೆಬ್​ಸೈಟ್ www.joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Indian Navy MR Recruitment 2022: SSLC ಪಾಸಾದವರಿಗೆ ನಾಕೌಪಡೆಯಲ್ಲಿ ಉದ್ಯೋಗಾವಕಾಶ: ವೇತನ 30 ಸಾವಿರ ರೂ.
Indian Navy Recruitment 2022
Follow us
| Updated By: ಝಾಹಿರ್ ಯೂಸುಫ್

Updated on:Dec 08, 2022 | 2:29 PM

Indian Navy MR Recruitment 2022: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ನೌಕಾಪಡೆಯು ಅಗ್ನಿವೀರ್ ಎಂಆರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೌಕಾಪಡೆಯ ಅಧಿಕೃತ ವೆಬ್​ಸೈಟ್ www.joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 100
  • ಮಹಿಳೆಯರಿಗೆ- 20 ಹುದ್ದೆಗಳು
  • ಪುರುಷರಿಗೆ- 80 ಹುದ್ದೆಗಳು

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಾಲಾ ಶಿಕ್ಷಣ ಮಂಡಳಿಗಳಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು ಅಥವಾ ಎಸ್​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ವಯೋಮಿತಿ: ಅಭ್ಯರ್ಥಿಗಳು ಮೇ 1, 2002 ಮತ್ತು ಅಕ್ಟೋಬರ್ 31, 2005 ರ ನಡುವೆ ಜನಿಸಿರಬೇಕು.

ಪರೀಕ್ಷಾ ಶುಲ್ಕ: ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ ರೂ. 550 ಪಾವತಿಸಬೇಕಾಗುತ್ತದೆ. ಶುಲ್ಕವನ್ನು ಪಾವತಿಸಿದ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷಾ ಪ್ರವೇಶ ಕಾರ್ಡ್‌ಗಳನ್ನು ವಿತರಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಅಧಿಕೃತ ಅಧಿಸೂಚನೆಯ ಪ್ರಕಾರ, ಅಗ್ನಿವೀರ್ (MR) ಬ್ಯಾಚ್‌ನ ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳನ್ನು ಒಳಗೊಂಡಿರುತ್ತದೆ:

  • (i) ಶಾರ್ಟ್‌ಲಿಸ್ಟಿಂಗ್ (ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ)
  • (ii) ಲಿಖಿತ ಪರೀಕ್ಷೆ, PFT ಮತ್ತು ಆರಂಭಿಕ ವೈದ್ಯಕೀಯ
  • (iii) ಅಂತಿಮ ನೇಮಕಾತಿ-ವೈದ್ಯಕೀಯ ಪರೀಕ್ಷೆ

ಇದನ್ನೂ ಓದಿ: Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರ ರೂ. ನೀಡಲಾಗುತ್ತದೆ. ಇದರ ಜೊತೆಗೆ ಉಡುಗೆ ಮತ್ತು ಪ್ರಯಾಣದ ವೆಚ್ಚಗಳನ್ನು ಸಹ ನೀಡುತ್ತಾರೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022

ಇದನ್ನೂ ಓದಿ: CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 2:29 pm, Thu, 8 December 22