Indian Navy MR Recruitment 2022: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ನೌಕಾಪಡೆಯು ಅಗ್ನಿವೀರ್ ಎಂಆರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೌಕಾಪಡೆಯ ಅಧಿಕೃತ ವೆಬ್ಸೈಟ್ www.joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಾಲಾ ಶಿಕ್ಷಣ ಮಂಡಳಿಗಳಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು ಅಥವಾ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಮೇ 1, 2002 ಮತ್ತು ಅಕ್ಟೋಬರ್ 31, 2005 ರ ನಡುವೆ ಜನಿಸಿರಬೇಕು.
ಪರೀಕ್ಷಾ ಶುಲ್ಕ:
ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ ರೂ. 550 ಪಾವತಿಸಬೇಕಾಗುತ್ತದೆ. ಶುಲ್ಕವನ್ನು ಪಾವತಿಸಿದ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷಾ ಪ್ರವೇಶ ಕಾರ್ಡ್ಗಳನ್ನು ವಿತರಿಸಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಧಿಕೃತ ಅಧಿಸೂಚನೆಯ ಪ್ರಕಾರ, ಅಗ್ನಿವೀರ್ (MR) ಬ್ಯಾಚ್ನ ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳನ್ನು ಒಳಗೊಂಡಿರುತ್ತದೆ:
ಇದನ್ನೂ ಓದಿ: Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರ ರೂ. ನೀಡಲಾಗುತ್ತದೆ. ಇದರ ಜೊತೆಗೆ ಉಡುಗೆ ಮತ್ತು ಪ್ರಯಾಣದ ವೆಚ್ಚಗಳನ್ನು ಸಹ ನೀಡುತ್ತಾರೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022
ಇದನ್ನೂ ಓದಿ: CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 2:29 pm, Thu, 8 December 22