Indian Navy Recruitment 2021: SSLC ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ
ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in/en ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
Indian Navy Recruitment 2021: ಭಾರತೀಯ ನೌಕಾಪಡೆಯ ನಾವಿಕ – ಮೆಟ್ರಿಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ಸೈಟ್ (- joinindiannavy.gov.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಒಟ್ಟು 350 ಹುದ್ದೆಗಳು ಖಾಲಿಯಿದ್ದು, ಜುಲೈ 23, 2021ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಸುಮಾರು 1,750 ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ (ಪಿಎಫ್‌ಟಿ) ಆಹ್ವಾನಿಸುವ ನಿರೀಕ್ಷೆಯಿದೆ. ಲಿಖಿತ ಪರೀಕ್ಷೆಯಲ್ಲಿ ಹಾಜರಾಗಲು ಕಟ್ ಆಫ್ ಅಂಕಗಳನ್ನು ನಿಗದಿಪಡಿಸಲಾಗುತ್ತದೆ. ಈ ಅಂಕಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಬಹುದು. ಈ ಹುದ್ದೆಗಳ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಭ್ಯರ್ಥಿಗಳು ಮಾನ್ಯತೆ ಪಡೆದ ಶಾಲಾ ಶಿಕ್ಷಣ ಮಂಡಳಿಗಳಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂದರೆ ಕರ್ನಾಟಕದ ಎಸ್ಎಸ್ಎಲ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಮಾನದಂಡ: ಅರ್ಜಿದಾರರು ಏಪ್ರಿಲ್ 1, 2001 ರಿಂದ ಸೆಪ್ಟೆಂಬರ್ 30, 2004 ರ ನಡುವೆ ಜನಿಸಿರಬೇಕು.
ನೇಮಕಾತಿಗಾಗಿ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷಾ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಅರ್ಹತಾ ಪರೀಕ್ಷೆಯ ಶೇಕಡಾವಾರು (10 ನೇ ತರಗತಿ) ಆಧಾರದ ಮೇಲೆ ಹಾಗೂ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷಾ ಸಾಮರ್ಥ್ಯದ ಆಧಾರದ ಮೇಲೆ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಖಾಲಿ ಹುದ್ದೆಗಳನ್ನು ರಾಜ್ಯವಾರು ರೀತಿಯಲ್ಲಿ ಹಂಚಿಕೆ ಮಾಡಿರುವುದರಿಂದ ಕಟ್ ಆಫ್ ಅಂಕಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜುಲೈ 19, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 23, 2021
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ https://www.joinindiannavy.gov.in/en ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.