Indian Navy Recruitment 2023: ಪದವೀಧರರಿಗೆ ಭಾರತೀಯ ನೌಕಾಪಡೆಯಲ್ಲಿದೆ ಉದ್ಯೋಗಾವಕಾಶ
Indian Navy Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿಗಾಗಿ ನೋಂದಾಯಿಸಿಕೊಳ್ಳಬಹುದು.
Indian Navy Recruitment 2023: ನೀವು ಭಾರತೀಯ ಸೇನೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ನೌಕಾಪಡೆಯು ಕಾರ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಿಗೆ ಅಭ್ಯರ್ಥಿಗಳನ್ನು ಎಸ್‌ಎಸ್‌ಬಿ ಸಂದರ್ಶನದಿಂದಲೇ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿಗಾಗಿ ನೋಂದಾಯಿಸಿಕೊಳ್ಳಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಮಾಹಿತಿ ತಂತ್ರಜ್ಞಾನ ಕಾರ್ಯ ನಿರ್ವಾಹಕ- 70 ಹುದ್ದೆಗಳು
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 60% ಅಂಕಗಳೊಂದಿಗೆ BCA/BSc / MSc/ BE/ B Tech/ M Tech ಅಥವಾ MCA ಪದವಿ ಹೊಂದಿರಬೇಕು. ಇದಲ್ಲದೆ, NCC ಅಭ್ಯರ್ಥಿಗಳಿಗೆ ಕಟ್ ಆಫ್ ಅಂಕಗಳಲ್ಲಿ 5% ಸಡಿಲಿಕೆಯನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆಯಾ ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಇದಾದ ನಂತರ ಅವರನ್ನು ಎಸ್‌ಎಸ್‌ಬಿ ಸಂದರ್ಶನಕ್ಕೆ ಕರೆಯಲಾಗುವುದು. ಎಸ್‌ಎಸ್‌ಬಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
Also Read: LIC Recruitment 2023: ಎಲ್ಐಸಿ ಉದ್ಯೋಗಾವಕಾಶ: ಪದವೀಧರರು ಅರ್ಜಿ ಸಲ್ಲಿಸಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 1998 ಹಾಗೂ ಜನವರಿ 1, 2004 ರ ನಡುವೆ ಜನಿಸಿರಬೇಕು.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 5, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 3:06 pm, Mon, 23 January 23