IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿನ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: May 30, 2022 | 9:15 AM

IOCL Recruitment 2022: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನಗಳು ಹಿಂದಿ / ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುತ್ತದೆ.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿನ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
IOCL Recruitment 2022
Follow us on

IOCL SMO and ACMO Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪೆನಿಯು ಹಿರಿಯ ವೈದ್ಯಕೀಯ ಅಧಿಕಾರಿ, ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಹುದ್ದೆಗಳ ವಿವರಗಳು: ಹಿರಿಯ ವೈದ್ಯಕೀಯ ಅಧಿಕಾರಿ (SMO), ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ (ACMO) ಹುದ್ದೆಗಳು.

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 43

ಹುದ್ದೆಯ ವಿವರ:
ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳು: 35 ಹುದ್ದೆಗಳು
ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳು: 8 ಹುದ್ದೆಗಳು

ವಯೋಮಿತಿ: ಅಭ್ಯರ್ಥಿಗಳು 35 ರಿಂದ 50 ವರ್ಷ ವಯಸ್ಸಿನೊಳಗಿರಬೇಕು.

ವೇತನ:
ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ರೂ. 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ
ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ರೂ. 90,000 ರಿಂದ 2,40,000 ರೂ.ವರೆಗೆ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆಗಳು: ಎಂಎಸ್​. ಎಂಡಿ, ಪಿಜಿ ಡಿಪ್ಲೊಮಾ ಅಥವಾ ತತ್ಸಮಾನ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ/ OBC/ EWS ಅಭ್ಯರ್ಥಿಗಳಿಗೆ: ರೂ.300 ಹಾಗೆಯೇ SC / ST / PWBD / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನಗಳು ಹಿಂದಿ / ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 7, 2022.

ಲಿಖಿತ ಪರೀಕ್ಷೆಯ ದಿನಾಂಕ: ಜೂನ್ 19, 2022.

ಹಾರ್ಡ್ ಕಾಪಿ ಕಳುಹಿಸಬೇಕಾದ ವಿಳಾಸ:
The Advertiser, Post Box No.3096, Head Post Office, Lodhi Road, New Delhi 110003

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.