Indian Railway Recruitment 2022: ರೈಲ್ವೆ ಇಲಾಖೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Apr 06, 2022 | 10:42 PM

Indian Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ ner.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Indian Railway Recruitment 2022: ರೈಲ್ವೆ ಇಲಾಖೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Railway Recruitment 2022
Follow us on

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯ ಈಶಾನ್ಯ ರೈಲ್ವೆಯ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯು ಕ್ರೀಡಾ ಕೋಟಾದಡಿಯಲ್ಲಿ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ ner.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 25 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Railway Recruitment 2022: ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 21

Indian Railway Recruitment 2022: ಅರ್ಹತಾ ಮಾನದಂಡಗಳು
GP- ₹ 1900/2000 ಹುದ್ದೆಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
GP- ₹ 2400 (ತಾಂತ್ರಿಕ) ಹುದ್ದೆಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಗಣಿತ ಅಥವಾ ಭೌತಶಾಸ್ತ್ರವನ್ನು ಒಂದು ವಿಷಯವಾಗಿ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
GP- ₹ 2800 ಹುದ್ದೆಗಳು: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಅದರ ಸಮಾನ ಅರ್ಹತೆ ಹೊಂದಿರಬೇಕು.

Indian Railway Recruitment 2022: ವಯೋಮಿತಿ:
18 ರಿಂದ 25 ವರ್ಷಗಳ ನಡುವೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Indian Railway Recruitment 2022: ಅರ್ಜಿ ಶುಲ್ಕ:
SC, ST, ಮಾಜಿ ಸೈನಿಕರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕಾಗುತ್ತದೆ.

Indian Railway Recruitment 2022: ಆಯ್ಕೆ ಪ್ರಕ್ರಿಯೆ:
ಕಾರ್ಯಕ್ಷಮತೆ ಮತ್ತು ಕ್ರೀಡೆ ಮತ್ತು ಶೈಕ್ಷಣಿಕ ಅರ್ಹತೆಯ ಮೌಲ್ಯಮಾಪನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Indian Railway Recruitment 2022: ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 25, 2022

Indian Railway Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

Published On - 10:38 pm, Wed, 6 April 22