AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

Indian Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrccr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Indian Railway Recruitment 2022
TV9 Web
| Edited By: |

Updated on: Dec 25, 2022 | 8:15 AM

Share

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯಲ್ಲಿನ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrccr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಮುಂಬೈ ಕ್ಲಸ್ಟರ್: 1659 ಹುದ್ದೆಗಳು
  • ಭೂಸಾವಲ್ ಕ್ಲಸ್ಟರ್: 418 ಹುದ್ದೆಗಳು
  • ಪುಣೆ ಕ್ಲಸ್ಟರ್: 152 ಹುದ್ದೆಗಳು
  • ನಾಗ್ಪುರ ಕ್ಲಸ್ಟರ್: 114 ಹುದ್ದೆಗಳು
  • ಸೋಲಾಪುರ್ ಕ್ಲಸ್ಟರ್: 79 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 2422

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50 ಪ್ರತಿಶತ ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಐಟಿಐ ಪ್ರಮಾಣಪತ್ರವನ್ನು ಸಹ ಹೊಂದಿರಬೇಕು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 15-12-2022 ಕ್ಕೆ 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ 24 ವರ್ಷಗಳ ಒಳಗಿನವರಾಗಿರಬೇಕು. ಇನ್ನು SC/ST ಅಭ್ಯರ್ಥಿಗಳಿಗೆ 05 ವರ್ಷಗಳು ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 10ನೇ ತರಗತಿ (ಕನಿಷ್ಠ 50% ಒಟ್ಟು ಅಂಕಗಳೊಂದಿಗೆ) + ಐಟಿಐ ಅಂಕಗಳ ಶೇಕಡಾವಾರು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.

ಇದನ್ನೂ ಓದಿ: Central Railway Recruitment 2022: 2422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸ್‌ ಆದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2023.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ