Indian Railway Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Dec 25, 2022 | 8:15 AM

Indian Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrccr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Indian Railway Recruitment 2022
Follow us on

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯಲ್ಲಿನ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrccr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಮುಂಬೈ ಕ್ಲಸ್ಟರ್: 1659 ಹುದ್ದೆಗಳು
  • ಭೂಸಾವಲ್ ಕ್ಲಸ್ಟರ್: 418 ಹುದ್ದೆಗಳು
  • ಪುಣೆ ಕ್ಲಸ್ಟರ್: 152 ಹುದ್ದೆಗಳು
  • ನಾಗ್ಪುರ ಕ್ಲಸ್ಟರ್: 114 ಹುದ್ದೆಗಳು
  • ಸೋಲಾಪುರ್ ಕ್ಲಸ್ಟರ್: 79 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 2422

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50 ಪ್ರತಿಶತ ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಐಟಿಐ ಪ್ರಮಾಣಪತ್ರವನ್ನು ಸಹ ಹೊಂದಿರಬೇಕು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 15-12-2022 ಕ್ಕೆ 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ 24 ವರ್ಷಗಳ ಒಳಗಿನವರಾಗಿರಬೇಕು. ಇನ್ನು SC/ST ಅಭ್ಯರ್ಥಿಗಳಿಗೆ 05 ವರ್ಷಗಳು ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 10ನೇ ತರಗತಿ (ಕನಿಷ್ಠ 50% ಒಟ್ಟು ಅಂಕಗಳೊಂದಿಗೆ) + ಐಟಿಐ ಅಂಕಗಳ ಶೇಕಡಾವಾರು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.

ಇದನ್ನೂ ಓದಿ: Central Railway Recruitment 2022: 2422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸ್‌ ಆದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2023.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.