Indian Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಇದರೊಂದಿಗೆ, NCVT/SCVT ನೀಡಿದ ಅಧಿಸೂಚಿತ ವಿಷಯದಲ್ಲಿ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ:
10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳು ಅಥವಾ ಅದರ ಸಮಾನ ಪರೀಕ್ಷೆ ಮತ್ತು ITI/ಟ್ರೇಡ್ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗೆ ಹಾಜರಾಗಬೇಕಾಗುತ್ತದೆ.
ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
ವಯೋಮಿತಿ:
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.