AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway Recruitment 2022: SSLC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ

Indian Railway Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2022: SSLC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Indian Railway Recruitment 2022
TV9 Web
| Edited By: |

Updated on: Oct 03, 2022 | 7:45 AM

Share

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯ ಪೂರ್ವ ರೈಲ್ವೆ (Eastern Railway) ಅಡಿಯಲ್ಲಿ ಅಪ್ರೆಂಟಿಸ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಹೌರಾ ವಿಭಾಗ – 659 ಹುದ್ದೆಗಳು
  • ಲಿಲುವಾ ಕಾರ್ಯಾಗಾರ – 612 ಹುದ್ದೆಗಳು
  • ಸೀಲ್ದಾ ವಿಭಾಗ – 440 ಹುದ್ದೆಗಳು
  • ಕಂಚ್ರಪಾರಾ ಕಾರ್ಯಾಗಾರ – 187 ಹುದ್ದೆಗಳು
  • ಮಾಲ್ಡಾ ವಿಭಾಗ – 138 ಹುದ್ದೆಗಳು
  • ಅಸನ್ಸೋಲ್ ಕಾರ್ಯಾಗಾರ – 412 ಹುದ್ದೆಗಳು
  • ಜಮಾಲ್ಪುರ್ ಕಾರ್ಯಾಗಾರ – 667 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 3115

ಅರ್ಹತಾ ಮಾನದಂಡಗಳು: ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, NCVT/SCVT ಹೊರಡಿಸಿದ ಅಧಿಸೂಚನೆಯಂತೆ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ: ಈ ಅಪ್ರೆಂಟಿಸ್ ಹುದ್ದೆಗಳಿಗೆ 15 ವರ್ಷದಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಐಟಿಐನಲ್ಲಿನ ವಿದ್ಯಾರ್ಹತೆ ಮತ್ತು ಸರಾಸರಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗಾಗಿ ಕರೆಯಲಾಗುತ್ತದೆ. ಆ ಬಳಿಕ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 29, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ