Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೇಯಲ್ಲಿ ಉದ್ಯೋಗಾವಕಾಶ
Indian Railway Recruitment 2022: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ ಜನವರಿ 17, 2022 ಕ್ಕೆ 24 ವರ್ಷಗಳನ್ನು ತಲುಪಿರಬಾರದು.
Indian Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವಕರಿಗೆ ಇಲ್ಲಿದೆ ಉತ್ತಮ ಅವಕಾಶ. ಇದಕ್ಕಾಗಿ (Indian Railway Recruitment 2022) ಭಾರತೀಯ ರೈಲ್ವೇ ಕೇಂದ್ರ ರೈಲ್ವೇ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrccr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 16. ಇದರೊಳಗೆ ಅರ್ಜಿ ಸಲ್ಲಿಸಬೇಕಿದೆ. ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ಸಂಖ್ಯೆ: ಒಟ್ಟು 2422 ಅಪ್ರೆಂಟಿಸ್ ಹುದ್ದೆಗಳಿಗಾಗಿ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಅದಕ್ಕೆ ಸಮಾನವಾದ (10+2 ಪರೀಕ್ಷಾ ವ್ಯವಸ್ಥೆಯಲ್ಲಿ) ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ ರಾಷ್ಟ್ರೀಯ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೇನಿಂಗ್‌ನಿಂದ ಸಂಬಂಧಿತ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ ಜನವರಿ 17, 2022 ಕ್ಕೆ 24 ವರ್ಷಗಳನ್ನು ತಲುಪಿರಬಾರದು.
ಅರ್ಜಿ ಶುಲ್ಕ: ಅಭ್ಯರ್ಥಿಯು 100 ರೂ. ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್ / ಎಸ್‌ಬಿಐ ಚಲನ್ ಇತ್ಯಾದಿಗಳನ್ನು ಬಳಸಿಕೊಂಡು ಪಾವತಿಯನ್ನು ಮಾಡಬಹುದು.
ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 17 ಜನವರಿ ಸಲ್ಲಿಸಲು ಕೊನೆಯ ದಿನಾಂಕ – 16 ಫೆಬ್ರವರಿ
ಅರ್ಜಿ ಸಲ್ಲಿಕೆ ಹೇಗೆ? ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯ ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇದನ್ನೂ ಓದಿ: IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!
ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ
ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್