ಭಾರತೀಯ ರೈಲ್ವೆಯಲ್ಲಿ ಖಾಲಿಯಿರುವ 1036 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Dec 24, 2024 | 3:29 PM

Indian Railways Ministerial Recruitment 2024: ಭಾರತೀಯ ರೈಲ್ವೆ ಇಲಾಖೆಯೂ ದೇಶದಲ್ಲಿ ಅತ್ಯಂತ ದೊಡ್ಡ ಸಂಪರ್ಕ ವ್ಯವಸ್ಥೆಯಾಗಿದ್ದು, ಇದೀಗ ಈ ಇಲಾಖೆಯಲ್ಲಿ ಖಾಲಿಯಿರುವ 1036 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡಲು ಆಸಕ್ತಿಯಿರುವ ಉದ್ಯೋಗಕಾಂಕ್ಷಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಸಂಬಂಧಪಟ್ಟಂತೆ ಹುದ್ದೆಗಳ ವಿವರ, ವೇತನಶ್ರೇಣಿ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿದೆ.

ಭಾರತೀಯ ರೈಲ್ವೆಯಲ್ಲಿ ಖಾಲಿಯಿರುವ 1036 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
ಭಾರತೀಯ ರೈಲ್ವೇ ನೇಮಕಾತಿ
Follow us on

ಭಾರತೀಯ ರೈಲ್ವೆ ಇಲಾಖೆಯ ಹಲವು ವಿಭಾಗಗಳಲ್ಲಿ ಖಾಲಿಯಿರುವ 1,036 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಜೂನಿಯರ್ ಸೋನೋಗ್ರಾಫರ್, ಜೂನಿಯರ್ ಟ್ರಾನ್ಸ್ಲೇಟರ್, ಸ್ಟಾಪ್ ಮತ್ತು ಅಸಿಸ್ಟೆಂಟ್ ಇನ್ಸ್ಪೆಕ್ಟರ್, ಮುಖ್ಯ ಕಾನೂನು ಸಹಾಯಕ ಹುದ್ದೆಗಳು ಸೇರಿದಂತೆ ಇನ್ನಿತ್ತರ ಹುದ್ದೆಗಳು ಖಾಲಿಯಿದ್ದು, ಜನವರಿ 7 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ಆರಂಭವಾಗಲಿದೆ. ಇದು ಮಿನಿಸ್ಟೇರಿಯಲ್ ಹಾಗೂ ಐಸೋಲೇಟೆಡ್ ಕೆಟಗರಿಯ ಹುದ್ದೆಗಳಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

* ಇಲಾಖೆಯ ಹೆಸರು : ಭಾರತೀಯ ರೈಲ್ವೆ ಇಲಾಖೆ

* ಹುದ್ದೆಗಳು : ಜೂನಿಯರ್ ಸೋನೋಗ್ರಾಫರ್, ಜೂನಿಯರ್ ಟ್ರಾನ್ಸ್ಲೇಟರ್, ಸ್ಟಾಪ್ ಮತ್ತು ಅಸಿಸ್ಟೆಂಟ್ ಇನ್ಸ್ಪೆಕ್ಟರ್, ಮುಖ್ಯ ಕಾನೂನು ಸಹಾಯಕ, ದೈಹಿಕ ತರಬೇತಿ ಭೋದಕ, ಸಂಗೀತ ಶಿಕ್ಷಕ, ಪ್ರಯೋಗಾಲಯ ಸಹಾಯಕ ಹಾಗೂ ಇತರ ಹುದ್ದೆಗಳು.

* ಒಟ್ಟು ಹುದ್ದೆಗಳು :1036 ಹುದ್ದೆಗಳು

* ವೇತನ ಶ್ರೇಣಿ : ಮಾಸಿಕ ವೇತನ ರೂ 18,000 – ರೂ 85,000

ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ

* ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ಮೇಲ್ಕಂಡ ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ, ಪದವಿ, ಬಿಇಡ್, ಸಿಟಿಇಡಿ, ಡಿಪ್ಲೋಮಾ, ಇಂಜಿನಿಯರಿಂಗ್, ತಂತ್ರಜ್ಞಾನ ಡಿಪ್ಲೋಮಾ ಪದವಿ ಪಡೆದಿರಬೇಕು.

* ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 48 ವರ್ಷ ದಾಟಿರಬಾರದು. ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪಿ ಡಬ್ಲ್ಯೂ ಡಿ, ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ಮಾಜಿ ಸೈನಿಕರಿಗೆ ರೂ 250 ಅರ್ಜಿ ಶುಲ್ಕ ಹಾಗೂ ಇತರ ವರ್ಗದವರಿಗೆ ರೂ 500 ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ.

ಆಯ್ಕೆ ವಿಧಾನ

* ಕಂಪ್ಯೂಟರ್ ಆಧಾರಿತ ಪರೀಕ್ಷೆ

* ಕೌಶಲ್ಯ ಹಾಗೂ ಇತರ ಮೌಲ್ಯಮಾಪನ ಆಧಾರಿತ ಪರೀಕ್ಷೆ

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 7 ಜನವರಿ 2025

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 6, ಫೆಬ್ರವರಿ 2025

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Tue, 24 December 24