IOB Recruitment 2022: 10ನೇ ತರಗತಿ ಪಾಸಾದವರಿಗೆ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ
IOB Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iob.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.
IOB Bank Security Guard Recruitment 2022: ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ಸೆಕ್ಯುರಿಟಿ ಗಾರ್ಡ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 20 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈಗಾಗಲೇ ಅರ್ಜಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iob.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: 18 ರಿಂದ 26 ವರ್ಷದೊಳಗಿನ ಅಭ್ಯರ್ಥಿಗಳು ವಯೋಮಿತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 15, 2022 ಎಂದು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iob.in ಗೆ ಭೇಟಿ ನೀಡಬೇಕು. ಅಲ್ಲಿ, ವೃತ್ತಿ ವಿಭಾಗಕ್ಕೆ ಹೋಗುವ ಮೂಲಕಸೆಕ್ಯುರಿಟಿ ಗಾರ್ಡ್ ನೇಮಕಾತಿಯ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಆ ಬಳಿಕ ಅಲ್ಲಿ ನೀಡಲಾಗಿರುವ ಅರ್ಜಿಯಲ್ಲಿ ಎಲ್ಲಾ ಮಾಹಿತಿಯನ್ನು ನಮೂದಿಸಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಬೇಕು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.