
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜನವರಿ 12ರ ಮೊದಲು ಅಧಿಕೃತ IOCL ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸತಕ್ಕದ್ದು. ಕಂಪನಿಯು ಒಟ್ಟು 501 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರಿಗೆ ಅಗತ್ಯವಿರುವ ಅರ್ಹತೆಗಳು ಮತ್ತು ಅವರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಕಂಪನಿಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು. ಗ್ರಾಜುಯೇಟ್ ಅಪ್ರೆಂಟಿಸ್‌ಗಾಗಿ, ಬಿಬಿಎ, ಬಿಎ, ಬಿಕಾಂ ಮತ್ತು ಬಿಎಸ್ಸಿ ಪದವಿಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಅಪ್ರೆಂಟಿಸ್‌ಗಾಗಿ, ಅಭ್ಯರ್ಥಿಗಳು ಸಂಬಂಧಿತ ಶಾಖೆಯಲ್ಲಿ ಡಿಪ್ಲೊಮಾ ಹೊಂದಿರಬೇಕು.
ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ
ಅರ್ಜಿದಾರರನ್ನು ಅವರ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಫಂಡ್ ಸಹ ಸಿಗುತ್ತದೆ. ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಅಧಿಕೃತ IOCL ವೆಬ್‌ಸೈಟ್‌ನಲ್ಲಿ ಅಪ್ರೆಂಟಿಸ್ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಿ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ