IOCL Recruitment 2022 ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಜೂನಿಯರ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ಮತ್ತು ಪುದುಚೇರಿ ಸೇರಿದಂತೆ ಪ್ರದೇಶಗಳ ಒಟ್ಟು 39 ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಶುರುವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು iocl.com ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಶೈಕ್ಷಣಿಕ ಅರ್ಹತೆ:
ಜೂನಿಯರ್ ಆಪರೇಟರ್ (ಏವಿಯೇಷನ್) Gr. I : 12ನೇ ತರಗತಿಯನ್ನು ಕನಿಷ್ಠ 45% ಅಂಕಗಳೊಂದಿಗೆ ಪಾಸ್ ಆಗಿರಬೇಕು. ಅಲ್ಲದೆ ಒಂದು ವರ್ಷದ ಕೆಲಸದ ಅನುಭವವೂ ಇರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ 26 ವರ್ಷ ಎಂದು ನಿಗದಿಪಡಿಸಲಾಗಿದೆ. ಆದಾಗ್ಯೂ, ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುತ್ತದೆ. ಈ ಬಗ್ಗೆಗಿನ ಹೆಚ್ಚಿನ ಮಾಹಿತಿ ಇಲ್ಲಿ ಪರಿಶೀಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಆಯ್ಕೆಯ ವಿಧಾನವು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪ್ರಾವೀಣ್ಯತೆಯ ದೈಹಿಕ ಪರೀಕ್ಷೆಯನ್ನು ಒಳಗೊಂಡಿರುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 29, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.