IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
IOCL Recruitment 2022: ಅಪ್ರೆಂಟಿಸ್ ಸಮಯದಲ್ಲಿ ಸ್ಟೈಫಂಡ್ ಪಾವತಿಸಲಾಗುತ್ತದೆ. ಈ ಮೂಲಕ ವೇತನದ ರೂಪದಲ್ಲಿ 50,000 ರೂ.ನಿಂದ 1,60,000 ರೂ. ಸಿಗಲಿದೆ.
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಗ್ರಾಜುಯೇಟ್ ಅಪ್ರೆಂಟಿಸ್ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
ವಿವರಗಳು: ಹುದ್ದೆಗಳು ವಿವರಗಳು: ಗ್ರಾಜುಯೇಟ್ ಅಪ್ರೆಂಟಿಸ್ ಇಂಜಿನಿಯರ್ ಹುದ್ದೆಗಳು
ವಿಭಾಗಗಳು: ಕೆಮಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಇನ್ಸ್ಟ್ರುಮೆಂಟೇಶನ್, ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಮೆಟಲರ್ಜಿಕಲ್ ಇಂಜಿನಿಯರಿಂಗ್
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜೂನ್ 30, 2022 ರೊಳಗೆ 26 ವರ್ಷಗಳನ್ನು ಮೀರಬಾರದು.
ವೇತನ ಶ್ರೇಣಿ: ಅಪ್ರೆಂಟಿಸ್ ಸಮಯದಲ್ಲಿ ಸ್ಟೈಫಂಡ್ ಪಾವತಿಸಲಾಗುತ್ತದೆ. ಈ ಮೂಲಕ ವೇತನದ ರೂಪದಲ್ಲಿ 50,000 ರೂ.ನಿಂದ 1,60,000 ರೂ. ಸಿಗಲಿದೆ.
ವಿದ್ಯಾರ್ಹತೆ: ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಹುದ್ದೆಗೆ ಅನುಗುಣವಾಗಿ ಸಂಬಂಧಿತ ವಿಶೇಷತೆಯಲ್ಲಿ ಬಿಎಸ್ಸಿ ಪಡೆದಿರಬೇಕು. ಹಾಗೆಯೇ ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.
ಆಯ್ಕೆ ವಿಧಾನ: GATE 2022 ಸ್ಕೋರ್ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 22, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ .
ಇದನ್ನೂ ಓದಿ: IPL 2022 VIDEO: ಏನೋ ಮಾಡ್ತೀಯಾ..? ಮೈದಾನದಲ್ಲೇ ಜಗಳಕ್ಕಿಳಿದ ಹರ್ಷಲ್-ಪರಾಗ್
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್