IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ ನೇಮಕಾತಿ: ವೇತನ 1 ಲಕ್ಷ ರೂ.

| Updated By: ಝಾಹಿರ್ ಯೂಸುಫ್

Updated on: Sep 16, 2022 | 8:00 AM

IOCL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್​ ಆಯಿಲ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ ನೇಮಕಾತಿ: ವೇತನ 1 ಲಕ್ಷ ರೂ.
IOCL Recruitment 2022
Follow us on

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಇಂಜಿನಿಯರಿಂಗ್ ಸಹಾಯಕ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಐಒಸಿಎಲ್‌ನ ಪೈಪ್‌ಲೈನ್ ವಿಭಾಗದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್​ ಆಯಿಲ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 56

ಶೈಕ್ಷಣಿಕ ಅರ್ಹತೆ:

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಇಂಜಿನಿಯರಿಂಗ್ ಸಹಾಯಕ (ಮೆಕ್ಯಾನಿಕಲ್): ಮೂರು ವರ್ಷಗಳ ಪೂರ್ಣ ಸಮಯದ ಡಿಪ್ಲೊಮಾ (ಅಥವಾ ಕನಿಷ್ಠ ಒಂದು ವರ್ಷದ ಅವಧಿಯ ITI ನಂತರ ಲ್ಯಾಟರಲ್ ಪ್ರವೇಶದ ಮೂಲಕ ಎರಡು ವರ್ಷಗಳು) ಪದವಿ ಹೊಂದಿರಬೇಕು. ಜೊತೆಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ಆಟೋಮೊಬೈಲ್ ಎಂಜಿನಿಯರಿಂಗ್​ನಲ್ಲಿ ಕನಿಷ್ಠ 55% ಹೊಂದಿರಬೇಕು.
  • ಇಂಜಿನಿಯರಿಂಗ್ ಸಹಾಯಕ (ಎಲೆಕ್ಟ್ರಿಕ್)- ಅಭ್ಯರ್ಥಿಗಳು ಇಂಜಿನಿಯರಿಂಗ್ ಸಂಬಂಧಿತ ವಿಷಯದಲ್ಲಿ ಮೂರು ವರ್ಷಗಳ ಪೂರ್ಣ ಸಮಯದ ಡಿಪ್ಲೊಮಾ ಅಥವಾ ಐಟಿಐ ನಂತರ ಎರಡು ವರ್ಷಗಳ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಮಾಡಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 26 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

  • ಇಂಜಿನಿಯರಿಂಗ್ ಸಹಾಯಕ (ಮೆಕ್ಯಾನಿಕಲ್): -– 25000 ರಿಂದ 105000 ರೂ.
  • ಇಂಜಿನಿಯರಿಂಗ್ ಸಹಾಯಕ (ಎಲೆಕ್ಟ್ರಿಕ್)- –23000 ರಿಂದ 78000 ರೂ.

ಅರ್ಜಿ ಶುಲ್ಕ:

  • ಸಾಮಾನ್ಯ, OBC, EWS ಅಭ್ಯರ್ಥಿಗಳಿಗೆ – ರೂ. 100
  • SC, ST ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ – ಯಾವುದೇ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಕೌಶಲ್ಯ / ಪ್ರಾವೀಣ್ಯತೆ / ದೈಹಿಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 10, 2022
  • ಪರೀಕ್ಷೆಯ ದಿನಾಂಕ – ನವೆಂಬರ್ 6, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ನೇರವಾಗಿ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.