IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ 1760 ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Dec 26, 2022 | 8:15 AM

IOCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ 1760 ಹುದ್ದೆಗಳಿಗೆ ಅರ್ಜಿ ಆಹ್ವಾನ
IOCL Recruitment 2022
Follow us on

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. IOCL ತಂತ್ರಜ್ಞ, ಪದವಿ ಮತ್ತು ಟ್ರೇಡ್ ಅಪ್ರೆಂಟಿಸ್ (ತಾಂತ್ರಿಕ ಮತ್ತು ತಾಂತ್ರಿಕೇತರ)ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 1760 ಹುದ್ದೆಗಳು

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೊಮಾ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ 18 ವರ್ಷದಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 03, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.