AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IOCL Recruitment 2022: ಇಂಡಿಯನ್ ಆಯಿಲ್‌ನಲ್ಲಿ ಹಲವು ಹುದ್ದೆಗಳಲ್ಲಿ ಉದ್ಯೋಗಾವಕಾಶ, ಶೀಘ್ರದಲ್ಲೇ ಅರ್ಜಿ ಸಲ್ಲಿಸಿ

IOCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ/ಪ್ರಾವೀಣ್ಯತೆ/ದೈಹಿಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

IOCL Recruitment 2022: ಇಂಡಿಯನ್ ಆಯಿಲ್‌ನಲ್ಲಿ ಹಲವು ಹುದ್ದೆಗಳಲ್ಲಿ ಉದ್ಯೋಗಾವಕಾಶ, ಶೀಘ್ರದಲ್ಲೇ ಅರ್ಜಿ ಸಲ್ಲಿಸಿ
IOCL Recruitment 2022
TV9 Web
| Edited By: |

Updated on:Mar 19, 2022 | 8:43 PM

Share

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ನೀವು ಸರ್ಕಾರಿ ಕೆಲಸವನ್ನು ಹುಡುಕುತ್ತಿದ್ದರೆ, IOCL ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್-IV (ಪ್ರೊಡಕ್ಷನ್) ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಮಾರ್ಚ್ 2022. ಅರ್ಜಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಒಟ್ಟು 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ . ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯ ವಿದ್ಯಾರ್ಹತೆಗಳನ್ನು ಕೋರಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ನೀಡಿರುವ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಓದಲು ಅಭ್ಯರ್ಥಿಗಳಿಗೆ ಸಲಹೆ ನೀಡಲಾಗಿದೆ. ಅನರ್ಹ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಕೆಮಿಕಲ್/ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ಅಥವಾ B.Sc (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರ) ಪದವಿಯಲ್ಲಿ 3 ವರ್ಷಗಳ ಡಿಪ್ಲೊಮಾವನ್ನು ಹೊಂದಿರಬೇಕು. ಪಂಪ್ ಹೌಸ್, ಫೈರ್ ಹೀಟರ್, ಕಂಪ್ರೆಸರ್, ಡಿಸ್ಟಿಲೇಷನ್ ಕಾಲಮ್, ರಿಯಾಕ್ಟರ್, ಹೀಟ್ ಎಕ್ಸ್‌ಚೇಂಜರ್ ಇತ್ಯಾದಿಗಳಲ್ಲಿ ಪೆಟ್ರೋಲಿಯಂ ರಿಫೈನರಿ / ಪೆಟ್ರೋಕೆಮಿಕಲ್ಸ್ / ಫರ್ಟಿಲೈಸರ್ / ಹೆವಿ ಕೆಮಿಕಲ್ / ಗ್ಯಾಸ್ ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ಕಾರ್ಯಾಚರಣೆಯಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ/ಪ್ರಾವೀಣ್ಯತೆ/ದೈಹಿಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಯ ವೇಳೆ ನೀಡಿರುವ ಮೊಬೈಲ್ ಅಥವಾ ಇ-ಮೇಲ್‌ನಲ್ಲಿ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತದೆ. ಇನ್ನು ಈ ಹುದ್ದೆಗಳಿಗೆ 18 ರಿಂದ 26 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 All Team Jerseys: ಹೇಗಿದೆ ನೋಡಿ 10 ತಂಡಗಳ ಹೊಸ ಜೆರ್ಸಿ

Published On - 8:42 pm, Sat, 19 March 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್