IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ನೀವು ಸರ್ಕಾರಿ ಕೆಲಸವನ್ನು ಹುಡುಕುತ್ತಿದ್ದರೆ, IOCL ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್-IV (ಪ್ರೊಡಕ್ಷನ್) ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಮಾರ್ಚ್ 2022. ಅರ್ಜಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಒಟ್ಟು 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ . ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯ ವಿದ್ಯಾರ್ಹತೆಗಳನ್ನು ಕೋರಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ನೀಡಿರುವ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಓದಲು ಅಭ್ಯರ್ಥಿಗಳಿಗೆ ಸಲಹೆ ನೀಡಲಾಗಿದೆ. ಅನರ್ಹ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಕೆಮಿಕಲ್/ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ಅಥವಾ B.Sc (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರ) ಪದವಿಯಲ್ಲಿ 3 ವರ್ಷಗಳ ಡಿಪ್ಲೊಮಾವನ್ನು ಹೊಂದಿರಬೇಕು. ಪಂಪ್ ಹೌಸ್, ಫೈರ್ ಹೀಟರ್, ಕಂಪ್ರೆಸರ್, ಡಿಸ್ಟಿಲೇಷನ್ ಕಾಲಮ್, ರಿಯಾಕ್ಟರ್, ಹೀಟ್ ಎಕ್ಸ್ಚೇಂಜರ್ ಇತ್ಯಾದಿಗಳಲ್ಲಿ ಪೆಟ್ರೋಲಿಯಂ ರಿಫೈನರಿ / ಪೆಟ್ರೋಕೆಮಿಕಲ್ಸ್ / ಫರ್ಟಿಲೈಸರ್ / ಹೆವಿ ಕೆಮಿಕಲ್ / ಗ್ಯಾಸ್ ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ಕಾರ್ಯಾಚರಣೆಯಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ/ಪ್ರಾವೀಣ್ಯತೆ/ದೈಹಿಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಯ ವೇಳೆ ನೀಡಿರುವ ಮೊಬೈಲ್ ಅಥವಾ ಇ-ಮೇಲ್ನಲ್ಲಿ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತದೆ. ಇನ್ನು ಈ ಹುದ್ದೆಗಳಿಗೆ 18 ರಿಂದ 26 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IPL 2022 All Team Jerseys: ಹೇಗಿದೆ ನೋಡಿ 10 ತಂಡಗಳ ಹೊಸ ಜೆರ್ಸಿ
Published On - 8:42 pm, Sat, 19 March 22