IPPB GDS Recruitment 2025: ಸರ್ಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಡಿಗ್ರಿ ಪಾಸಾಗಿದ್ರೆ ಸಾಕು

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಒಟ್ಟು 348 ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಪದವೀಧರರು ಅಕ್ಟೋಬರ್ 29 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. 20-35 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಮಾಸಿಕ 30,000ರೂ. ವರೆಗೆ ವೇತನ ಹಾಗೂ ಸರ್ಕಾರಿ ಸೌಲಭ್ಯ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ ippbonline.com ಭೇಟಿ ನೀಡಿ.

IPPB GDS Recruitment 2025: ಸರ್ಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಡಿಗ್ರಿ ಪಾಸಾಗಿದ್ರೆ ಸಾಕು
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್

Updated on: Oct 10, 2025 | 3:06 PM

ಸರ್ಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ತಯಾರಿ ನಡೆಸುತ್ತಿರುವವರಿಗೆ ಗುಡ್​​ ನ್ಯೂಸ್​​ ಇಲ್ಲಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IBPS) ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದಡಿಯಲ್ಲಿ ಒಟ್ಟು 348 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅಧಿಸೂಚನೆಯ ಪ್ರಕಾರ, ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 9 ರಿಂದ ಪ್ರಾರಂಭವಾಗಿದ್ದು,ಅಕ್ಟೋಬರ್ 29 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ippbonline.com ಅಥವಾ IBPS ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆಗಳೇನು?

ಈ ನೇಮಕಾತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಯಾವುದೇ ವಿಭಾಗದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

ವಯಸ್ಸಿನ ಮಿತಿ:

ವಯಸ್ಸಿನ ಮಿತಿಗೆ ಸಂಬಂಧಿಸಿದಂತೆ, ಅರ್ಜಿದಾರರು ಕನಿಷ್ಠ 20 ವರ್ಷ ವಯಸ್ಸಿನವರಾಗಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಆಗಸ್ಟ್ 1, 2025 ರಂತೆ ವಯಸ್ಸನ್ನು ಲೆಕ್ಕಹಾಕಲಾಗುತ್ತದೆ. ಸರ್ಕಾರಿ ನಿಯಮಗಳ ಪ್ರಕಾರ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಏನು?

ಈ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿಗಾಗಿ, ಅಭ್ಯರ್ಥಿಗಳನ್ನು ಅವರ ಪದವಿ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿದಾರರ ಸಂಖ್ಯೆ ಹೆಚ್ಚಿದ್ದರೆ, ಬ್ಯಾಂಕ್ ಆನ್‌ಲೈನ್ ಪರೀಕ್ಷೆಯನ್ನು ಸಹ ನಡೆಸಬಹುದು.

ಸಂಬಳ ಎಷ್ಟು ಸಿಗಲಿದೆ?

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000ರೂ. ವರೆಗೆ ವೇತನ ದೊರೆಯಲಿದ್ದು, ಜೊತೆಗೆ ತುಟ್ಟಿಭತ್ಯೆ, ಪ್ರಯಾಣ ಭತ್ಯೆ ಮತ್ತು ವಸತಿ ಮುಂತಾದ ಇತರ ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುವುದು. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ಆಗಿದ್ದು, ಆನ್‌ಲೈನ್‌ನಲ್ಲಿ ಸಲ್ಲಿಸಬಹುದು.

ಇದನ್ನೂ ಓದಿ: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಬ್ಯಾಂಕಿನ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ನೋಂದಣಿ ನಂತರ, ನಿಮ್ಮ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ನಿಮ್ಮ ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ. ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ, ಅಭ್ಯರ್ಥಿಗಳು ಅದನ್ನು ಡೌನ್ಲೋಡ್​​ ಮಾಡಿಕೊಂಡು ಪ್ರಿಂಟ್​ ಕಾಪಿಯನ್ನು ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Fri, 10 October 25