IREL Recruitment 2023: ಐಆರ್​ಇಎಲ್ ನೇಮಕಾತಿ: ಆರಂಭಿಕ ವೇತನ 40 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Jul 22, 2023 | 2:29 PM

IREL Recruitment 2023: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 27 ವರ್ಷಗಳನ್ನು ಮೀರಿರಬಾರದು.

IREL Recruitment 2023: ಐಆರ್​ಇಎಲ್ ನೇಮಕಾತಿ: ಆರಂಭಿಕ ವೇತನ 40 ಸಾವಿರ ರೂ.
IREL Recruitment 2023
Follow us on

IREL Recruitment 2023: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್​ನಲ್ಲಿನ (IREL) ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಮ್ಯಾನೇಜ್‌ಮೆಂಟ್ ಟ್ರೈನೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ( IREL )
  • ಹುದ್ದೆಗಳ ಸಂಖ್ಯೆ: 35
  • ಉದ್ಯೋಗ ಸ್ಥಳ: ಆಲ್ ಇಂಡಿಯಾ
  • ಹುದ್ದೆಗಳ ಹೆಸರು: ಮ್ಯಾನೇಜ್‌ಮೆಂಟ್ ಟ್ರೈನಿ

ಶೈಕ್ಷಣಿಕ ಅರ್ಹತೆ:

  • ಎಂಟಿ (ತಾಂತ್ರಿಕ): ಬಿಇ ಅಥವಾ ಬಿ.ಟೆಕ್
  • ಎಂಟಿ (HR): MBA , MSW, ಸ್ನಾತಕೋತ್ತರ ಪದವಿ
  • ಎಂಟಿ (ಫೈನಾನ್ಸ್): CA, CMA, B.Com, MBA

ವಯೋಮಿತಿ:

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 27 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • OBC (NCL) ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು
  • PwBD (UR/EWS) ಅಭ್ಯರ್ಥಿಗಳು: 10 ವರ್ಷಗಳು
  • PwBD [OBC (NCL)] ಅಭ್ಯರ್ಥಿಗಳು: 13 ವರ್ಷಗಳು
  • PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:

SC/ST/PwBD/ESM/ಮಹಿಳೆ: ಯಾವುದೇ ಶುಲ್ಕವಿಲ್ಲ.
ಎಲ್ಲಾ ಇತರೆ ಅಭ್ಯರ್ಥಿಗಳಿಗೆ: ರೂ.500/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.40000 ರಿಂದ ರೂ.140000/- ರವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಆಗಸ್ಟ್-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: irel.co.in