AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO Recruitment 2025: ನೀವು ಕೂಡ ಇಸ್ರೋದಲ್ಲಿ ವಿಜ್ಞಾನಿಯಾಗಲು ಬಯಸುವಿರಾ? ಹಾಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 39 ವಿಜ್ಞಾನಿ/ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಜುಲೈ 14 ಕೊನೆಯ ದಿನಾಂಕ. ಬಿಇ/ಬಿಟೆಕ್ (ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್) ಪದವೀಧರರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಮತ್ತು ಇತರ ಅರ್ಹತಾ ಮಾನದಂಡಗಳ ಮಾಹಿತಿಯನ್ನು isro.gov.in ನಲ್ಲಿ ಪಡೆಯಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.

ISRO Recruitment 2025: ನೀವು ಕೂಡ ಇಸ್ರೋದಲ್ಲಿ ವಿಜ್ಞಾನಿಯಾಗಲು ಬಯಸುವಿರಾ? ಹಾಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ
Isro Recruitment 2025
ಅಕ್ಷತಾ ವರ್ಕಾಡಿ
|

Updated on:Jun 29, 2025 | 4:17 PM

Share

ವಿಜ್ಞಾನಿಯಾಗುವ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್​ ನ್ಯೂಸ್​​. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ವಿಜ್ಞಾನಿ / ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಿದೆ. ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 14 ಎಂದು ನಿಗದಿಪಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಸ್ರೋ isro.gov.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು 39 ವಿಜ್ಞಾನಿ / ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಹತಾ ಮಾನದಂಡಗಳು ಯಾವುವು?

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ| 65 ಅಂಕಗಳೊಂದಿಗೆ ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ (ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಅಥವಾ ಕಂಪ್ಯೂಟರ್ ಸೈನ್ಸ್) ಬಿಇ/ಬಿಟೆಕ್ ಅಥವಾ ತತ್ಸಮಾನ ಪದವಿ ಅಥವಾ ಸಿಜಿಪಿಎ 6.84/10 ಅನ್ನು ಹೊಂದಿರಬೇಕು.
  • ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಂದರೆ ಜುಲೈ 14, 2025 ರಂದು ಅಭ್ಯರ್ಥಿಗಳು 28 ವರ್ಷಕ್ಕಿಂತ ಹೆಚ್ಚಿರಬಾರದು. ಆದಾಗ್ಯೂ, SC/ST ಅಭ್ಯರ್ಥಿಗಳಿಗೆ 33 ವರ್ಷಗಳು, OBC ಅಭ್ಯರ್ಥಿಗಳಿಗೆ 31 ವರ್ಷಗಳು ಮತ್ತು ಮಾಜಿ ಸೈನಿಕರು ಮತ್ತು ದಿವ್ಯಾಂಗರಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: SBI ಬ್ಯಾಂಕಿನಲ್ಲಿ ಕೆಲಸ ಪಡೆಯಲು ಸುವರ್ಣ ಅವಕಾಶ, 2600 ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಇಸ್ರೋದ ಅಧಿಕೃತ ವೆಬ್‌ಸೈಟ್ isro.gov.in ಗೆ ಭೇಟಿ ನೀಡಿ.
  • ನೀವು ಹೊಸ ಬಳಕೆದಾರರಾಗಿದ್ದರೆ ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿ. ಅದರ ನಂತರ ಲಾಗಿನ್ ಆಗಿ.
  • ಈಗ ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳೊಂದಿಗೆ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ನಂತರ ನಿಮ್ಮ ಫೋಟೋ, ಸಹಿ ಮತ್ತು ಸಂಬಂಧಿತ ಪ್ರಮಾಣಪತ್ರಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡಿ.
  • ನಂತರ ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ.
  • ಈಗ ನಿಮ್ಮ ಅರ್ಜಿ ನಮೂನೆಯನ್ನು ಪರಿಶೀಲಿಸಿ ಸಲ್ಲಿಸಿ. ಹೆಚ್ಚಿನ ಅಗತ್ಯಕ್ಕಾಗಿ ಫಾರ್ಮ್‌ನ ಪ್ರಿಂಟ್​ ಕಾಪಿಯನ್ನು ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:16 pm, Sun, 29 June 25

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್