AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO SAC Recruitment 2026: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ 49 ವಿಜ್ಞಾನಿ/ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಪಿಎಚ್‌ಡಿ/ಎಂಇ/ಎಂಟೆಕ್/ಎಂಎಸ್ಸಿ/ಬಿಇ/ಬಿಟೆಕ್/ಬಿಎಸ್ಸಿ ಪದವಿ ಪಡೆದ 18-35 ವಯಸ್ಸಿನವರು ಫೆಬ್ರವರಿ 12ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ 750 ರೂ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಮಾಸಿಕ ವೇತನ 56,100 - 2,08,700 ರೂ. ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಉತ್ತಮ ವೃತ್ತಿಗೆ ಇದೊಂದು ಸುವರ್ಣಾವಕಾಶ.

ISRO SAC Recruitment 2026: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಅಕ್ಷತಾ ವರ್ಕಾಡಿ
|

Updated on: Jan 27, 2026 | 4:17 PM

Share

ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಅಹಮದಾಬಾದ್‌ನ ಬಾಹ್ಯಾಕಾಶ ಕೇಂದ್ರ (Space Applications Centre – SAC) ನಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ (SD/SC) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ವಿಭಾಗಗಳಲ್ಲಿ ಒಟ್ಟು 49 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹೀಗಿವೆ.

ಶೈಕ್ಷಣಿಕ ಅರ್ಹತೆ:

ವಿಜ್ಞಾನಿ/ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಯ ಸ್ವಭಾವಕ್ಕೆ ಅನುಗುಣವಾಗಿ ಸಂಬಂಧಿತ ವಿಭಾಗದಲ್ಲಿ ಪಿಎಚ್‌ಡಿ / ಎಂಇ / ಎಂಟೆಕ್ / ಎಂಎಸ್‌ಸಿ / ಬಿಇ / ಬಿಟೆಕ್ / ಬಿಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ, ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿರುವಂತೆ ಸಂಬಂಧಿತ ಕ್ಷೇತ್ರದ ಕೆಲಸದ ಅನುಭವ ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿ:

ಫೆಬ್ರವರಿ 12, 2026ರ ಸ್ಥಿತಿಗೆ ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷಗಳ ನಡುವೆ ಇರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ದಿವ್ಯಾಂಗ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳವರೆಗೆ ಸಡಿಲಿಕೆಯಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 12 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು.

ಇದನ್ನೂ ಓದಿ: ಸುಪ್ರೀಂ ಕೋರ್ಟ್​​ನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಅಂತಿಮ ಆಯ್ಕೆಯು ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ISROನ ಅಹಮದಾಬಾದ್‌ನ ಬಾಹ್ಯಾಕಾಶ ಅನ್ವಯಿಕ ಕೇಂದ್ರದಲ್ಲಿ ನೇಮಕ ಮಾಡಲಾಗುತ್ತದೆ.

ವೇತನ ಮತ್ತು ಸೌಲಭ್ಯಗಳು:

ಆಯ್ಕೆಯಾದ ವಿಜ್ಞಾನಿ/ಇಂಜಿನಿಯರ್‌ಗಳಿಗೆ ತಿಂಗಳಿಗೆ 56,100 ರಿಂದ 2,08,700 ರೂ. ವರೆಗೆ ವೇತನ ನೀಡಲಾಗುತ್ತದೆ. ಇದಲ್ಲದೆ, ಕೇಂದ್ರ ಸರ್ಕಾರದ ನಿಯಮಗಳಂತೆ ಭತ್ಯೆಗಳು ಮತ್ತು ಇತರ ಸೌಲಭ್ಯಗಳೂ ಲಭ್ಯವಿರುತ್ತವೆ.

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಉನ್ನತ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ISRO SAC ನೇಮಕಾತಿ ಅತ್ಯುತ್ತಮ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಗಮನವಾಗಿ ಓದುವಂತೆ ಸಲಹೆ ನೀಡಲಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ
ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ
ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್
ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!