ITBP Constable Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Aug 21, 2022 | 4:57 PM

ITBP Constable Recruitment 2022: ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್​ಸೈಟ್ recruitment.itbpolice.nic.in ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ITBP Constable Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ITBP Constable Recruitment 2022
Follow us on

ITBP Constable Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್​ಸೈಟ್ recruitment.itbpolice.nic.in ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಪುರುಷರಿಗಾಗಿ ಇರುವ ಖಾಲಿ ಹುದ್ದೆಗಳ ಸಂಖ್ಯೆ – 44
  • ಮಹಿಳೆಯರಿಗಾಗಿ ಇರುವ ಖಾಲಿ ಹುದ್ದೆಗಳ ಸಂಖ್ಯೆ – 8
  • ಒಟ್ಟು ಹುದ್ದೆಗಳ ಸಂಖ್ಯೆ- 42

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು.

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:
ಶಾರೀರಿಕ ದಕ್ಷತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೀಕರಣ ಮತ್ತು ವಿವರವಾದ ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಹಾಗೆಯೇ ಪ್ರಮಾಣಪತ್ರ ಮತ್ತು ದಾಖಲಾತಿಗಳು ಸರಿಯಾಗಿದ್ದರೆ ಮಾತ್ರ ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲು ಪ್ರವೇಶ ಪತ್ರಗಳನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 29, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

Published On - 4:57 pm, Sun, 21 August 22