ITBP Constable Recruitment 2022: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 69 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Nov 23, 2022 | 2:43 PM

ITBP Constable Recruitment 2022: ಈ ಹುದ್ದೆಗಳಿಗೆ 18 ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಕೆಲ ಹುದ್ದೆಗಳಿಗೆ 25 ವರ್ಷದವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ITBP Constable Recruitment 2022: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 69 ಸಾವಿರ ರೂ.
Jobs
Follow us on

ITBP Constable Tradesman recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಗ್ರೂಪ್ C ಯಲ್ಲಿ ಕಾನ್​ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್​ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 22 ರೊಳಗೆ ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ: 287
  • ಕಾನ್ಸ್‌ಟೇಬಲ್ ಟ್ರೇಡ್ಸ್‌ಮನ್ (ಪುರುಷ)- 246 ಹುದ್ದೆಗಳು
  • ಕಾನ್ಸ್‌ಟೇಬಲ್ ಟ್ರೇಡ್ಸ್‌ಮನ್ (ಮಹಿಳೆ)- 41 ಹುದ್ದೆಗಳು

ವಿದ್ಯಾರ್ಹತೆ:

  • ಕಾನ್‌ಸ್ಟ್ಟೇಬಲ್ (ಟೈಲರ್, ಮಾಲಿ ಮತ್ತು ಚಮ್ಮಾರ) -10ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಸಂಬಂಧಿತ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ ಅಥವಾ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
  • ಕಾನ್‌ಸ್ಟೇಬಲ್ (ಸಫಾಯಿ ಕರಂಚಾರಿ, ಧೋಬಿ, ಕ್ಷೌರಿಕ)- 10ನೇ ತರಗತಿಯಲ್ಲಿ ಉತ್ತೀರ್ಣರಾಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ 18 ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಕೆಲ ಹುದ್ದೆಗಳಿಗೆ 25 ವರ್ಷದವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ PET / PST, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 21 ಸಾವಿರದಿಂದ 69,100 ರವರೆಗೆ ವೇತನ ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ:
UR / OBC / EWS ವರ್ಗಕ್ಕೆ ಸೇರಿದ ಪುರುಷ ಅಭ್ಯರ್ಥಿಗಳು ರೂ. 100 ಶುಲ್ಕವನ್ನು ಪಾವತಿಸಬೇಕಾಗುತ್ತದೆ. SC/ST/ಮಹಿಳೆಯರು ಮತ್ತು ಮಾಜಿ ಸೈನಿಕರಿಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 22, 2022

ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕೃತ ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡಿ.
  • ‘new user notification’ ಗೆ ಹೋಗಿ ಮತ್ತು ಪೋರ್ಟಲ್‌ನಲ್ಲಿ ನೋಂದಾಯಿಸಿ.
  • Credentials ಲಾಗಿನ್ ಮಾಡಿ ಮತ್ತು ಪೋಸ್ಟ್‌ಗೆ ಅರ್ಜಿ ಸಲ್ಲಿಸಿ.
  • ಅರ್ಜಿಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಶುಲ್ಕವನ್ನು ಪಾವತಿಸಿ ಮತ್ತು ಸಲ್ಲಿಸಿ.
  • ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

Published On - 2:41 pm, Wed, 23 November 22