ITBP Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ನೇಮಕಾತಿ: ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

ITBP Head Constable Recruitment 2022: ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ITBP Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ನೇಮಕಾತಿ: ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ
ITBP Recruitment 2022
Follow us
| Updated By: ಝಾಹಿರ್ ಯೂಸುಫ್

Updated on: Jun 25, 2022 | 7:03 PM

ITBP Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಹೆಡ್ ಕಾನ್ಸ್‌ಟೇಬಲ್ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈಗಾಗಲೇ ಅರ್ಜಿ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಆಸಕ್ತರು ಮುಂದಿನ ತಿಂಗಳ ಮೊದಲ ವಾರದೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳು- 158
  • ಹೆಡ್ ಕಾನ್ಸ್‌ಟೇಬಲ್- 135 ಹುದ್ದೆಗಳು
  • ಸಹಾಯಕ ಸಬ್ ಇನ್‌ಸ್ಪೆಕ್ಟರ್- 23 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • 12ನೇ ತರಗತಿ ಉತ್ತೀರ್ಣರಾಗಿರಬೇಕು. ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನಿಮಿಷಕ್ಕೆ 30 ಪದಗಳ ಟೈಪಿಂಗ್ ವೇಗ ಹೊಂದಿರಬೇಕು. ಅಗತ್ಯ ಟೈಪಿಂಗ್ ವೇಗದ ಅರ್ಹತೆಯೊಂದಿಗೆ 12ನೇ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

  • 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ತಿಂಗಳ ವೇತನ:

  • ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹ 25500 ರಿಂದ ₹ 81100 ರವರೆಗಿನ ಮಾಸಿಕ ವೇತನವನ್ನು ನೀಡಲಾಗುತ್ತದೆ.
  • ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸ್ಟೆನೋ ಹುದ್ದೆಗಳಿಗೆ ₹ 29200 ರಿಂದ ₹ 93200 ವೇತನವನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 7 ಜುಲೈ 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ