ITBP Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ನಲ್ಲಿದೆ ಉದ್ಯೋಗಾವಕಾಶ
ITBP Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ITBP Recruitment 2022: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಸಹಾಯಕ ಕಮಾಂಡರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಆಗಸ್ಟ್ 11, 2022 ರಂದು ಪ್ರಾರಂಭವಾಗಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 11, ಇದರಲ್ಲಿ 5 ಹುದ್ದೆಗಳನ್ನು ಮೀಸಲಿಡಲಾಗಿದೆ. ಅದೇ SC, ST ವರ್ಗಗಳಿಗೆ 2 ಹುದ್ದೆಗಳು ಮತ್ತು EWS 1 ಹುದ್ದೆ ಮತ್ತು OBC ಗಳಿಗೆ 2 ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಇನ್ನು 6 ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಮೆಕ್ಯಾನಿಕಲ್ ಅಥವಾ ಆಟೋಮೊಬೈಲ್ ಎಂಜಿನಿಯರಿಂಗ್‌ನಿಂದ ಬಿಇ ಬಿ.ಟೆಕ್ ಪದವಿಯನ್ನು ಪಡೆದಿರುವ ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 30 ವರ್ಷಗಳು. ಆದಾಗ್ಯೂ, ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಡಿಲಿಕೆ ನೀಡಲಾಗಿದೆ. ಅದನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ₹ 400 ಶುಲ್ಕವನ್ನು ಪಾವತಿಸಬೇಕು. ಇನ್ನು SC, ST ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 56,100 ದಿಂದ 1,77,500 ರೂ.ವರೆಗೆ ವೇತನ ನಿಗದಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಆಗಸ್ಟ್ 11 ರಿಂದ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 9, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.