ITBP Recruitment 2022: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಸಬ್ ಇನ್ಸ್‌ಪೆಕ್ಟರ್ (SI) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್‌ಸೈಟ್ itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಸಬ್ ಇನ್ಸ್‌ಪೆಕ್ಟರ್ (ಮೇಲ್ವಿಚಾರಕ) – 37 ಹುದ್ದೆಗಳು
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 35400 ರಿಂದ 1,12,400 ರೂ.ವರೆಗೆ ವೇತನ ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪಾಸ್ ಆಗಿರಬೇಕು. ಅದರ ಜೊತೆಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ 20 ರಿಂದ 25 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ- ಜುಲೈ 16, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 14, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.