ITBP SI recruitment 2022: ಪಿಯುಸಿ ಪಾಸಾದವರಿಗೆ ಬಾರ್ಡರ್ ಪೊಲೀಸ್ನಲ್ಲಿದೆ ಉದ್ಯೋಗಾವಕಾಶ
ITBP SI recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ITBP SI recruitment 2022: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಸಬ್-ಇನ್ಸ್‌ಪೆಕ್ಟರ್ (ಸ್ಟಾಫ್ ನರ್ಸ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಈ ನೇಮಕಾತಿಯ ಮೂಲಕ ಒಟ್ಟು 18 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಹುದ್ದೆಗಳ ವರ್ಗೀಕರಣ:
ಈ ನೇಮಕಾತಿ ಮೂಲಕ 11 ಸಾಮಾನ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹಾಗೆಯೇ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಇಂತಿಷ್ಟು ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಇದರ ಮಾಹಿತಿ ಈ ಕೆಳಗಿನಂತಿದೆ.
- UR- 11 ಹುದ್ದೆಗಳು
- SC- 1 ಹುದ್ದೆ
- ST- 2 ಹುದ್ದೆಗಳು
- OBC- 2 ಹುದ್ದೆಗಳು
- EWS- 2 ಹುದ್ದೆಗಳು
ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ/10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಜನರಲ್ ನರ್ಸಿಂಗ್ ಮತ್ತು ಮಿಡ್‌ವೈಫರಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 21 ವರ್ಷದಿಂದ 30 ವರ್ಷಗಳ ನಡುವೆ ಇರಬೇಕು.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ₹ 200 ಪಾವತಿಸಬೇಕಾಗುತ್ತದೆ. ಆದಾಗ್ಯೂ, ಮಾಜಿ ಸೈನಿಕರು, ಎಸ್‌ಸಿ, ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 15, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.