Airport Jobs: ವಿಮಾನ ನಿಲ್ದಾಣದಲ್ಲಿ 2,442 ಹುದ್ದೆಗಳಿಗೆ ಭರ್ಜರಿ ನೇಮಕಾತಿ; 10th, ಪಿಯುಸಿ ಪಾಸ್​​ ಆಗಿದ್ರೆ ಸಾಕು

ನೋಯ್ಡಾದ ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2442 ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಲಾಗಿದೆ. ಗ್ರೌಂಡ್ ಸ್ಟಾಫ್, ಕಾರ್ಗೋ ಎಕ್ಸಿಕ್ಯೂಟಿವ್, ಲೋಡರ್ ಹುದ್ದೆಗಳಿಗೆ 10ನೇ ತರಗತಿ ಮತ್ತು ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ವಿಶೇಷ ತರಬೇತಿಯ ಅಗತ್ಯವಿಲ್ಲ. 15,000-35,000 ರೂ. ವೇತನದೊಂದಿಗೆ, ಫ್ರೆಶರ್‌ಗಳಿಗೂ ಅವಕಾಶವಿದೆ. ಜೂನ್ 15 ರೊಳಗೆ niasjewar.com ಮೂಲಕ ಅರ್ಜಿ ಸಲ್ಲಿಸಿ.

Airport Jobs: ವಿಮಾನ ನಿಲ್ದಾಣದಲ್ಲಿ 2,442 ಹುದ್ದೆಗಳಿಗೆ ಭರ್ಜರಿ ನೇಮಕಾತಿ; 10th, ಪಿಯುಸಿ ಪಾಸ್​​ ಆಗಿದ್ರೆ ಸಾಕು
ವಿಮಾನ ನಿಲ್ದಾಣದಲ್ಲಿ ನೇಮಕಾತಿ

Updated on: Apr 16, 2026 | 5:20 PM

ನೋಯ್ಡಾದ ಜೇವರ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ವಿಮಾನ ನಿಲ್ದಾಣದ ಕಾರ್ಯಾಚರಣೆ ಶೀಘ್ರದಲ್ಲೇ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಒಟ್ಟು 2,442 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಗ್ರೌಂಡ್ ಸ್ಟಾಫ್, ಕಾರ್ಗೋ ಎಕ್ಸಿಕ್ಯೂಟಿವ್ ಮತ್ತು ಲೋಡರ್ ಹುದ್ದೆಗಳಿದ್ದು, ವಿಶೇಷವೆಂದರೆ ಯಾವುದೇ ಏವಿಯೇಷನ್ ಡಿಪ್ಲೊಮಾ ಅಥವಾ ವಿಶೇಷ ತರಬೇತಿಯ ಅಗತ್ಯವಿಲ್ಲದೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಗ್ರೌಂಡ್ ಸ್ಟಾಫ್ ಮತ್ತು ಕಾರ್ಗೋ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ 12ನೇ ತರಗತಿ ಪಾಸಾದ 18 ರಿಂದ 30 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಇವರಿಗೆ ಮಾಸಿಕ 25,000 ರಿಂದ 35,000ರೂ. ವರೆಗೆ ವೇತನ ಸಿಗಲಿದೆ. ಇನ್ನು ಲೋಡರ್ ಹುದ್ದೆಗೆ 10ನೇ ತರಗತಿ ಪಾಸಾದ 20 ರಿಂದ 40 ವರ್ಷದೊಳಗಿನ ಪುರುಷರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, 15,000 ರಿಂದ 25,000ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಸಕ್ತ ಅಭ್ಯರ್ಥಿಗಳು ಜೂನ್ 15, 2026 ರೊಳಗೆ ಅಧಿಕೃತ ವೆಬ್‌ಸೈಟ್ www.niasjewar.com ಮೂಲಕ ತಮ್ಮ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ಅರ್ಜಿಯ ಜೊತೆಗೆ ಅಗತ್ಯ ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ವಿಮಾನಯಾನ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಹೊಸಬರಿಗೆ (Freshers) ಇದೊಂದು ಅತ್ಯುತ್ತಮ ವೇದಿಕೆಯಾಗಿದ್ದು, ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us