ಉದ್ಯೋಗಾಂಕ್ಷಿಗಳೇ ಗಮನಿಸಿ: ಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ವತಿಯಿಂದ ಜೂನ್​ 15 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.

ಉದ್ಯೋಗಾಂಕ್ಷಿಗಳೇ ಗಮನಿಸಿ: ಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
ಪ್ರಾತಿನಿಧಿಕ ಚಿತ್ರ

Updated on: Jun 12, 2023 | 10:14 PM

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಅಸೋಸಿಯೇಷನ್ (Bangalore Hotel Association) ವತಿಯಿಂದ ಜೂನ್​ 15 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಈ ಕುರಿತಾಗಿ ಪ್ರಕಟಣೆ ಹೊರಡಿಸಲಾಗಿದೆ. ಕೆಎಸ್​ಡಿಸಿ ಕಛೇರಿಯ ಕಲ್ಯಾಣ ಸುರಕ್ಷಾ ಭವನ, 4ನೇ ಮಹಡಿ, ಡೈರಿ ಸರ್ಕಲ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-29 ಬೆಳಗ್ಗೆ 09.30 ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹುದ್ದೆಯ ವಿವರ:  

ಸ್ಟೀವರ್ಡ್​​, ಕ್ಯಾಪ್ಟನ್​​, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಸೇರಿದಂತೆ ಇತರೆ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ಉದ್ಯೋಗಾವಕಾಶವಿದೆ.

ಇದನ್ನೂ ಓದಿ: Indian Navy Agniveer Recruitment 2023: ನೌಕಾಪಡೆಯಲ್ಲಿ ಅಗ್ನಿವೀರರ ನೇಮಕ -ಭಾರತೀಯ ನೌಕಾಪಡೆಯಲ್ಲಿ 1365 ಅಗ್ನಿವೀರ್ ಉದ್ಯೋಗಗಳಿಗೆ ಅಧಿಸೂಚನೆ ಬಿಡುಗಡೆ

ಅರ್ಹತಾ ವಿವರಗಳು ಹೀಗಿದೆ: 

10ನೇ ತರಗತಿ, ಪಿಯುಸಿ, ಡಿಪ್ಲೊಮಾದಲ್ಲಿ ಪಾಸ್​ ಅಥವಾ ಅನುತ್ತೀರ್ಣ ಮತ್ತು ಆಸಕ್ತರು ಯಾರೂಬೇಕಾದರು
ಭಾಗವಹಿಸಬಹುದಾಗಿದೆ.

ಸಂಬಳ:

ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ದರಿರುವ ವ್ಯಕ್ತಿಗಳನ್ನು ನೇಮಿಸಿಕೋಳ್ಳಲಾಗುತ್ತಿದ್ದು, ಇಎಸ್​​ಐ, ಪಿಎಫ್​​
ಒದಗಿಸುವುದರೊಂದಿಗೆ 13000 ರೂ. ದಿಂದ 16000 ರೂ. ಸಂಬಳ ನೀಡಲಾಗುತ್ತಿದೆ.

ಇದನ್ನೂ ಓದಿ: RBI Recruitment 2023: 35 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತರು ನಿಮಗದ ಜಾಲತಾಣಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಅಥವಾ ಜೂನ್​ 15ರಂದು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಮೇಳದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯಾಗಿ
9019485688, 08182-255294ಗೆ ಸಂಪರ್ಕಿಸಬಹುದಾಗಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us