Recruitment in Hubli Ayurveda Mahavidyalaya and Hospital- ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಅನುದಾನಿತ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ (Hubballi Ayurveda Seva Samiti Aided Ayurveda College and Hospital) ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ಬೆರಳಚ್ಚುಗಾರರು, ಸ್ಟಾಫ್ ನರ್ಸ್, ANM ನರ್ಸ್, ಅಟೆಂಡರ್, ವಾರ್ಡ್ ಆಯಾ ಮತ್ತು ಫಾರ್ಮಸಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬೇಕು. ಈ ಲೇಖನದಲ್ಲಿ ನೇಮಕಾತಿಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ (Qualification), ವಯೋಮಿತಿ (Age Limit), ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿ ವಿವರ ನೀಡಲಾಗಿದೆ. ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಆಯುಷ್ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬೇಕು. ಈ ಲೇಖನದಲ್ಲಿ ನೇಮಕಾತಿಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ (Qualification), ವಯೋಮಿತಿ (Age Limit), ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿ ವಿವರ ನೀಡಲಾಗಿದೆ. ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪೂರೈಸಿರಬೇಕು.
ಅರ್ಜಿ ಶುಲ್ಕ:
ಗ್ರೂಪ್-ಸಿ ಹುದ್ದೆಗಳಿಗೆ : 1,000 ರೂ
ಗ್ರೂಪ್-ಡಿ ಹುದ್ದೆಗಳಿಗೆ : 600 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 03/10/2024 ದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಅನುದಾನಿತ (AYUSH Department) ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹುಬ್ಬಳ್ಳಿಯ ಕಾರ್ಯಾಲಯದಿಂದ ಅರ್ಜಿಗಳನ್ನು ನಿಗದಿತ ಶುಲ್ಕವನ್ನು ಪಾವತಿಸಿ ದ್ವಿಪ್ರತಿಯಲ್ಲಿ ಪಡೆದು ಒಂದು ಅರ್ಜಿಯನ್ನು ಪ್ರಾಚಾರ್ಯರು ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹೆಣ್ಣಿರಿ ಬಡಾವಣೆ ಹುಬ್ಬಳ್ಳಿ -580024 ಇವರಿಗೆ ಇನ್ನೊಂದು ಅರ್ಜಿಯನ್ನು ಆಯುಕ್ತರು, ಆಯುಷ್ ಇಲಾಖೆ, ಧನ್ವಂತರಿ ರಸ್ತೆ, ಬೆಂಗಳೂರು-560009 ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ಅಕ್ಟೋಬರ್ 2024
ಪ್ರಮುಖ ಲಿಂಕುಗಳು:
ನೋಟಿಫಿಕೇಶನ್ Click Here
Published On - 11:14 am, Wed, 25 September 24