EPFO Recruitment 2023: ಇಪಿಎಫ್ಓ ಸಂಸ್ಥೆಯಲ್ಲಿದೆ 557 ಉದ್ಯೋಗ ಅವಕಾಶಗಳು -ಯುಪಿಎಸ್ಸಿ ಅಧಿಸೂಚನೆ

UPSC EPFO Recruitment 2023: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಮೂಲಕ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ 557 ಜಾರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

EPFO Recruitment 2023: ಇಪಿಎಫ್ಓ ಸಂಸ್ಥೆಯಲ್ಲಿದೆ 557 ಉದ್ಯೋಗ ಅವಕಾಶಗಳು -ಯುಪಿಎಸ್ಸಿ ಅಧಿಸೂಚನೆ
ಇಪಿಎಫ್ಓ ಸಂಸ್ಥೆಯಲ್ಲಿದೆ 557 ಉದ್ಯೋಗ ಅವಕಾಶಗಳು
ಸಾಧು ಶ್ರೀನಾಥ್​

Updated on: Feb 26, 2023 | 6:21 AM

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (Union Public Service Commission -UPSC Jobs) ಮೂಲಕ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ 557 ಜಾರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ (Employees’ Provident Fund Organisation -EPFO) 557 ಜಾರಿ ಅಧಿಕಾರಿ ಮತ್ತು ಸಹಾಯಕ ಜಾರಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ಪದವಿ ವ್ಯಾಸಂಗದಲ್ಲಿ ಪದವಿ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಸಂಬಂಧಿಸಿದ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು. ಅರ್ಜಿದಾರರ ವಯಸ್ಸು EO/AO ಹುದ್ದೆಗಳಿಗೆ 30 ವರ್ಷಗಳು ಮತ್ತು APFC ಹುದ್ದೆಗಳಿಗೆ 35 ವರ್ಷಗಳನ್ನು ಮೀರಬಾರದು.

ಅರ್ಹ ಅಭ್ಯರ್ಥಿಗಳು 17ನೇ ಮಾರ್ಚ್ 2023 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ರೂ.25 ನೋಂದಣಿ ಶುಲ್ಕವನ್ನು ಪಾವತಿಸಬೇಕು. SC/ST/PWD/ಮಹಿಳಾ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಂಬಳ ನಿಗದಿಪಡಿಸಲಾಗಿದೆ. ಇತರ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಖಾಲಿ ಹುದ್ದೆಗಳ ವಿವರ… ಜಾರಿ ಅಧಿಕಾರಿ/ ಅಕೌಂಟ್ಸ್ ಆಫೀಸರ್ (EO/AO) ಹುದ್ದೆಗಳು: 418
ಸಹಾಯಕ ಭವಿಷ್ಯ ನಿಧಿ ಆಯುಕ್ತರ (APFC) ಹುದ್ದೆಗಳು: 159 ಹುದ್ದೆಗಳು

2023 ಸಾಲಿನಲ್ಲಿ ಹೆಚ್ಚಿನ ಉದ್ಯೋಗಾವಕಾಶ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us