SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.

Junior Court Assistant Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ sci.gov.in ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
supreme court jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 20, 2022 | 2:45 PM

SCI Recruitment 2022: ಸುಪ್ರೀಂ ಕೋರ್ಟ್‌ನಲ್ಲಿ (SCI) ಉದ್ಯೋಗಾವಕಾಶವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಉತ್ತಮ ಅವಕಾಶ. ಏಕೆಂದರೆ ಸುಪ್ರೀಂ ಕೋರ್ಟ್​ನ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ sci.gov.in ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಭಾರತದ ಸುಪ್ರೀಂ ಕೋರ್ಟ್ 210 ಜೂನಿಯರ್ ಕೋರ್ಟ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10 ಜುಲೈ 2022 ಎಂದು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಇದಲ್ಲದೆ, ಕಂಪ್ಯೂಟರ್‌ನಲ್ಲಿ ಇಂಗ್ಲಿಷ್ ಟೈಪಿಂಗ್‌ನಲ್ಲಿ ನಿಮಿಷಕ್ಕೆ 35 ಪದಗಳ ವೇಗವನ್ನು ಹೊಂದಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ವರ್ಗದ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. SC / ST / PH ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ HRA ಸೇರಿದಂತೆ ಅಸ್ತಿತ್ವದಲ್ಲಿರುವ ಭತ್ಯೆಗಳ ದರದಂತೆ ತಿಂಗಳಿಗೆ 63,068 ರೂಪಾಯಿಗಳ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಆಬ್ಜೆಕ್ಟಿವ್ ಟೈಪ್ ಟೆಸ್ಟ್, ಆಬ್ಜೆಕ್ಟಿವ್ ಟೈಪ್ ಕಂಪ್ಯೂಟರ್ ಜ್ಞಾನ ಪರೀಕ್ಷೆ, ಟೈಪಿಂಗ್ ಟೆಸ್ಟ್ (ಇಂಗ್ಲಿಷ್) ಮತ್ತು ಇಂಗ್ಲಿಷ್‌ನಲ್ಲಿನ ವಿವರಣಾತ್ಮಕ ಪರೀಕ್ಷೆಯನ್ನು ಆಧರಿಸಿರುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.