AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) 412 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರು ಕಾರ್ಯಕರ್ತೆ ಹುದ್ದೆಗೂ, 10ನೇ ತರಗತಿ ಪೂರ್ಣಗೊಳಿಸಿದವರು ಸಹಾಯಕಿ ಹುದ್ದೆಗೂ ಅರ್ಜಿ ಸಲ್ಲಿಸಬಹುದು. ಅರ್ಹ ಮಹಿಳಾ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇದು ಕಲಬುರಗಿಯಲ್ಲಿ ಉದ್ಯೋಗಾವಕಾಶ ಹುಡುಕುತ್ತಿರುವ ಮಹಿಳೆಯರಿಗೆ ಉತ್ತಮ ಅವಕಾಶ.

Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!
ಅಂಗನವಾಡಿ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Mar 10, 2026 | 3:15 PM

Share

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ ಪಿಯುಸಿ (PUC) ಉತ್ತೀರ್ಣರಾಗಿರಬೇಕು ಮತ್ತು ಸಹಾಯಕಿಯರ ಹುದ್ದೆಗೆ 10ನೇ ತರಗತಿ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ (karnemakaone.kar.nic.in) ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಶೈಕ್ಷಣಿಕ ದಾಖಲೆಗಳು ಮತ್ತು ಇತ್ತೀಚಿನ ಭಾವಚಿತ್ರವನ್ನು ಸಿದ್ಧಪಡಿಸಿಕೊಂಡು, ಅಧಿಸೂಚನೆಯಲ್ಲಿನ ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಓದಿಕೊಳ್ಳಲು ಇಲಾಖೆ ಸೂಚಿಸಿದೆ. ಆನ್‌ಲೈನ್ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಿದ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಕಡ್ಡಾಯವಾಗಿ ಸುರಕ್ಷಿತವಾಗಿಟ್ಟುಕೊಳ್ಳುವುದು ಅವಶ್ಯಕ. ಫೆಬ್ರವರಿ 20 ರಿಂದ ಪ್ರಾರಂಭವಾದ ಈ ಅರ್ಜಿ ಪ್ರಕ್ರಿಯೆಯು ಮಾರ್ಚ್ 16 ರಂದು ಮುಕ್ತಾಯಗೊಳ್ಳಲಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಆಡಳಿತ ಮಂಡಳಿ ತಿಳಿಸಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!