ಕಲಬುರಗಿಯಲ್ಲಿ ಜನವರಿ 25ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ: ಇಲ್ಲಿದೆ ಮಾಹಿತಿ
ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜನವರಿ 25 ರಂದು 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ: ಜಿಲ್ಲೆಯ ಸರ್ಕಾರಿ ಐಟಿಐ ಕಾಲೇಜಿನ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ (jobs) ವಿನಿಮಯ ಕಚೇರಿಯಲ್ಲಿ ಇದೇ ಜನವರಿ 25 ರಂದು 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನೇರ ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಹೀಗಿದೆ
ಕಂಪನಿ: ಫ್ಲಿಪ್‍ಕಾರ್ಟ್, ಹುದ್ದೆ: ಡೆಲಿವರಿ ಎಕ್ಸಿಕ್ಯೂಟಿವ್, ಅರ್ಹತೆ: ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಬೈಕ್ ಹಾಗೂ ಡಿ.ಎಲ್. ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಇದನ್ನೂ ಓದಿ: LIC Recruitment 2023: ಎಲ್ಐಸಿ ಉದ್ಯೋಗಾವಕಾಶ: ಪದವೀಧರರು ಅರ್ಜಿ ಸಲ್ಲಿಸಿ
ಕಂಪನಿ: ಶ್ರೀ ಶಿವಾ ಎಂಟರ್ಪ್ರೈಸಸ್ (ಏರ್‍ಟೆಲ್ ಪೇಮೆಂಟ್ ಬ್ಯಾಂಕ್)ದಲ್ಲಿ, ಹುದ್ದೆ: ಸೇಲ್ಸ್ ಎಕ್ಸಿಕ್ಯೂಟಿವ್, ಅರ್ಹತೆ: ಎಸ್.ಎಸ್.ಎಲ್.ಸಿ./ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.
ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.
ಡೇ-ನಲ್ಮ್ ಯೋಜನೆಯಡಿ ವಿವಿಧ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲೆಯ ಆಳಂದ ಪುರಸಭೆಯಲ್ಲಿ 2022-23ನೇ ಸಾಲಿಗೆ ಅನುಷ್ಠಾನದಲ್ಲಿರುವ ಡೇ-ನಲ್ಮ್ ಯೋಜನೆಯಡಿ ಉಪಯೋಜನೆಯಾದ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳನಿಯುಕ್ತಿ ಕಾರ್ಯಕ್ರಮದಡಿ ಕೆಳಕಂಡ ತರಬೇತಿ ಪಡೆಯಲು ಆಳಂದ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಳಂದ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: DOT Recruitment 2023: ಸರ್ಕಾರಿ ಉದ್ಯೋಗಾವಕಾಶ: ವೇತನ 1.51 ಲಕ್ಷ ರೂ.
ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ಹಾಗೂ ಫ್ರಂಟ್ ಆಫೀಸ್ ಟ್ರೇನಿ ತರಬೇತಿ ಪಡೆಯಲು ದ್ವಿತೀಯ ಪಿಯುಸಿ ಪಾಸಾಗಿರಬೇಕು ಹಾಗೂ ಸಿವಿಂಗ್ ಮಶೀನ್ ಆಪರೇಟರ್ ತರಬೇತಿ ಪಡೆಯಲು 5ನೇ ತರಗತಿ ಪಾಸಾಗಿರಬೇಕು.
ನೀಡಬೇಕಾದ ದಾಖಲಾತಿಗಳು ಹೀಗಿವೆ
ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಆದಾಯ, ಆಧಾರ್ ಕಾರ್ಡ್, ಪಡಿತರ ಚೀಟಿ, ವಿದ್ಯಾರ್ಹತೆ ಅಂಕಪಟ್ಟಿ ದಾಖಲೆಗಳನ್ನು ಲಗತ್ತಿಸಿ 2023ರ ಫೆಬ್ರವರಿ 6 ರೊಳಗಾಗಿ ಆಳಂದ ಪುರಸಭೆ ಕಚೇರಿಯಲ್ಲಿ ಕಚೇರಿ ಸಮಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಳಂದ ಪುರಸಭೆಯ ಕಚೇರಿಯಲ್ಲಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.