Navy Recruitment 2022: 12ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿದೆ ಉದ್ಯೋಗಾವಕಾಶ
Indian Navy Recruitment 2022: ಈ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Navy Cadet Entry Scheme 2022: ಭಾರತೀಯ ನೌಕಾಪಡೆಯಲ್ಲಿ 12ನೇ ತರಗತಿ ಪಾಸ್ ಆದವರಿಗೆ ಉತ್ತಮ ಉದ್ಯೋಗಾವಕಾಶವಿದೆ. ಭಾರತೀಯ ನೌಕಾಪಡೆಯು ನಾಲ್ಕು ವರ್ಷಗಳ ಬಿ.ಟೆಕ್ ಪದವಿ ಕೋರ್ಸ್‌ಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಂದರೆ ಕೆಡೆಟ್ ಎಂಟ್ರಿ ಸ್ಕೀಮ್ ಅಡಿಯಲ್ಲಿ ಈ ನೇಮಕಾತಿಯನ್ನು ಮಾಡಲಾಗುತ್ತಿದೆ. ಈ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು:
- ಶಿಕ್ಷಣ ಶಾಖೆ – 5 ಹುದ್ದೆಗಳು
- ಕಾರ್ಯನಿರ್ವಾಹಕ ಮತ್ತು ತಾಂತ್ರಿಕ ಶಾಖೆ – 31 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕನಿಷ್ಠ 70% ಅಂಕಗಳೊಂದಿಗೆ 12ನೇ ತರಗತಿ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ) ಉತ್ತೀರ್ಣರಾಗಿರಬೇಕು. ಅಲ್ಲದೆ JEE (Main) 2022 ಪರೀಕ್ಷೆಯಲ್ಲಿ ಕಾಣಿಸಿಕೊಂಡಿರಬೇಕು.
ಆಯ್ಕೆ ಪ್ರಕ್ರಿಯೆ ಹೇಗೆ? ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಂದರೆ SSB ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಮಾಡಲಾಗುತ್ತದೆ. ಆ ಬಳಿಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ- ಆಗಸ್ಟ್ 18, 2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 28, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.