Navy Recruitment 2022: 12ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Aug 13, 2022 | 3:24 PM

Indian Navy Recruitment 2022: ಈ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Navy Recruitment 2022: 12ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿದೆ ಉದ್ಯೋಗಾವಕಾಶ
Indian Navy
Follow us on

Navy Cadet Entry Scheme 2022: ಭಾರತೀಯ ನೌಕಾಪಡೆಯಲ್ಲಿ 12ನೇ ತರಗತಿ ಪಾಸ್‌ ಆದವರಿಗೆ ಉತ್ತಮ ಉದ್ಯೋಗಾವಕಾಶವಿದೆ. ಭಾರತೀಯ ನೌಕಾಪಡೆಯು ನಾಲ್ಕು ವರ್ಷಗಳ ಬಿ.ಟೆಕ್ ಪದವಿ ಕೋರ್ಸ್‌ಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಂದರೆ ಕೆಡೆಟ್ ಎಂಟ್ರಿ ಸ್ಕೀಮ್ ಅಡಿಯಲ್ಲಿ ಈ ನೇಮಕಾತಿಯನ್ನು ಮಾಡಲಾಗುತ್ತಿದೆ. ಈ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು:

  • ಶಿಕ್ಷಣ ಶಾಖೆ – 5 ಹುದ್ದೆಗಳು
  • ಕಾರ್ಯನಿರ್ವಾಹಕ ಮತ್ತು ತಾಂತ್ರಿಕ ಶಾಖೆ – 31 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಕನಿಷ್ಠ 70% ಅಂಕಗಳೊಂದಿಗೆ 12ನೇ ತರಗತಿ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ) ಉತ್ತೀರ್ಣರಾಗಿರಬೇಕು. ಅಲ್ಲದೆ JEE (Main) 2022 ಪರೀಕ್ಷೆಯಲ್ಲಿ ಕಾಣಿಸಿಕೊಂಡಿರಬೇಕು.

ಇದನ್ನೂ ಓದಿ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ ಹೇಗೆ?
ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಂದರೆ SSB ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಮಾಡಲಾಗುತ್ತದೆ. ಆ ಬಳಿಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ- ಆಗಸ್ಟ್ 18, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 28, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.