KARBWWB Recruitment 2023: ಸರ್ಕಾರಿ ನೌಕರಿ: 186 ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jun 22, 2023 | 2:28 PM

KARBWWB Recruitment 2023: ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅಪ್ಲಿಕೇಶನ್ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KARBWWB Recruitment 2023: ಸರ್ಕಾರಿ ನೌಕರಿ: 186 ಹುದ್ದೆಗಳಿಗೆ ಅರ್ಜಿ ಆಹ್ವಾನ
KSFC Recruitment 2023
Follow us on

KARBWWB Recruitment 2023: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಹಲವು ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಫೀಲ್ಡ್ ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅಪ್ಲಿಕೇಶನ್ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

  • ಸಂಸ್ಥೆಯ ಹೆಸರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB)
  • ಹುದ್ದೆಗಳ ಸಂಖ್ಯೆ: 186
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: SDA, ಫೀಲ್ಡ್ ಇನ್ಸ್‌ಪೆಕ್ಟರ್‌

ಹುದ್ದೆಯ ಹೆಸರು ಮತ್ತು ಸಂಖ್ಯೆ:

  • ಕಲ್ಯಾಣ ಅಧಿಕಾರಿ- 12 ಹುದ್ದೆಗಳು
  • ಕ್ಷೇತ್ರ ನಿರೀಕ್ಷಕರು- 60 ಹುದ್ದೆಗಳು
  • ಮೊದಲ ವಿಭಾಗದ ಸಹಾಯಕ (FDA)- 12 ಹುದ್ದೆಗಳು
  • ಖಾಸಗಿ ಸಲಹೆಗಾರ- 2 ಹುದ್ದೆಗಳು
  • ಎರಡನೇ ವಿಭಾಗದ ಸಹಾಯಕ (SDA)- 100 ಹುದ್ದೆಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಕಲ್ಯಾಣ ಅಧಿಕಾರಿ- ರೂ. 37900 ರಿಂದ ರೂ. 70850/-
  • ಕ್ಷೇತ್ರ ನಿರೀಕ್ಷಕರು- ರೂ. 33450 ರಿಂದ ರೂ. 62600/-
  • ಮೊದಲ ವಿಭಾಗದ ಸಹಾಯಕ (FDA)- ರೂ. 27650 ರಿಂದ ರೂ. 52650/-
  • ಖಾಸಗಿ ಸಲಹೆಗಾರ- ರೂ. 21400 ರಿಂದ ರೂ. 42000/-
  • ಎರಡನೇ ವಿಭಾಗದ ಸಹಾಯಕ (SDA)- ರೂ. 21400 ರಿಂದ ರೂ. 42000/-

ಇದನ್ನೂ ಓದಿ: KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-06-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023
  • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25-07-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: karbwwb.karnataka.gov.in