Karnataka Bank Recruitment 2022: ಡಿಗ್ರಿ ಪಾಸಾದವರಿಗೆ ಕರ್ನಾಟಕ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ
Karnataka Bank Clerk Recruitment 2022: ಅಭ್ಯರ್ಥಿಗಳ ಆಯ್ಕೆಯು ಆನ್‌ಲೈನ್ ಪರೀಕ್ಷೆಯ ಮೂಲಕ ನಡೆಯಲಿದೆ. ಆನ್‌ಲೈನ್ ಪರೀಕ್ಷೆಯು ಜೂನ್ 2022 ರಲ್ಲಿ ನಡೆಯುವ ಸಾಧ್ಯತೆಯಿದೆ.
Bank Jobs 2022: ಕರ್ನಾಟಕ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ದೇಶಾದ್ಯಂತ ತನ್ನ ಶಾಖೆಗಳು/ಕಚೇರಿಗಳಿಗಾಗಿ ಈ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್ನ ಅಧಿಕೃತ ವೆಬ್‌ಸೈಟ್ karnatakabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಶೇ. 60 ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು.
ವಯೋಮಿತಿ: ಕರ್ಣಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 26 ವರ್ಷಗಳು. ಆದಾಗ್ಯೂ, ಎಸ್‌ಸಿ ಮತ್ತು ಎಸ್‌ಟಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: SC ಮತ್ತು ST ವರ್ಗದ ಅಭ್ಯರ್ಥಿಗಳು ರೂ. 600 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಹಾಗೆಯೇ ಇತರೆ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 700 ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಆನ್‌ಲೈನ್ ಪರೀಕ್ಷೆಯ ಮೂಲಕ ನಡೆಯಲಿದೆ. ಆನ್‌ಲೈನ್ ಪರೀಕ್ಷೆಯು ಜೂನ್ 2022 ರಲ್ಲಿ ನಡೆಯುವ ಸಾಧ್ಯತೆಯಿದೆ. ಪರೀಕ್ಷೆಯು ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು, ಮೈಸೂರು, ನವದೆಹಲಿ ಮತ್ತು ಶಿವಮೊಗ್ಗದಲ್ಲಿ ನಡೆಯಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 21, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.