Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

| Updated By: Digi Tech Desk

Updated on: Jan 02, 2023 | 2:35 PM

Karnataka Bank Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್​ karnatakabank.com ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ
Karnataka Bank Recruitment 2023
Follow us on

Karnataka Bank Recruitment 2023: ಕರ್ನಾಟಕ ಬ್ಯಾಂಕ್​ ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್​ karnatakabank.com ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

ಈ ನೇಮಕಾತಿಯ ಮೂಲಕ ದೇಶದಾದ್ಯಂತ ಇರುವ ವಿವಿಧ ಶಾಖೆಗಳು/ಕಚೇರಿಗಳಲ್ಲಿ ಆಫೀಸರ್ ಸ್ಕೇಲ್-I ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು. ಅಂದರೆ ಭಾರತ ಸರ್ಕಾರ/ಯುಜಿಸಿ/ಇತರ ಸರ್ಕಾರಿ ನಿಯಂತ್ರಕ ಸಂಸ್ಥೆಗಳಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪಡೆದವರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 28 ವರ್ಷಗಳು ಎಂದು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- 800 ರೂ.
  • ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳಿಗೆ- 700 ರೂ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಆನ್​ಲೈನ್ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 84 ಸಾವಿರ ರೂ. ನೀಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 10, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

Published On - 2:16 pm, Sat, 31 December 22