Karnataka Bank Recruitment 2024: ಕರ್ನಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಆರಂಭ, ಆಸಕ್ತರು ಅರ್ಜಿ ಸಲ್ಲಿಸಿ

ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಖಾಲಿಯಿರುವ ಗ್ರಾಹಕ ಸೇವಾ ಸಹಾಯಕ ಹುದ್ದೆ / ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದಾರೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ಎಲ್ಲ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿಯೂ ಈ ಕೆಳಗಿದೆ.

Karnataka Bank Recruitment 2024: ಕರ್ನಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಆರಂಭ, ಆಸಕ್ತರು ಅರ್ಜಿ ಸಲ್ಲಿಸಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 27, 2024 | 11:16 AM

ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ಕರ್ನಾಟಕ ಬ್ಯಾಂಕ್ ಗ್ರಾಹಕ ಸೇವಾ ಸಹಾಯಕ ಹುದ್ದೆ / ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾವುದೇ ಪದವೀಧರರು ಈ ತಿಂಗಳೊಳಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ

* ನೇಮಕಾತಿ ಬ್ಯಾಂಕ್ : ಕರ್ನಾಟಕ ಬ್ಯಾಂಕ್ ಲಿಮಿಟೆಡ್

* ಹುದ್ದೆ ಹೆಸರು : ಗ್ರಾಹಕ ಸೇವಾ ಸಹಾಯಕ ಹುದ್ದೆ / ಕ್ಲರ್ಕ್

* ಹುದ್ದೆಗಳ ಸ್ಥಳ : ಬ್ಯಾಂಕ್‌ನ ದೇಶದಾದ್ಯಂತ ಕಚೇರಿಗಳು, ಶಾಖೆಗಳಲ್ಲಿ ಉದ್ಯೋಗ ಮಾಡುವ ಅವಕಾಶ.

* ವೇತನ ಶ್ರೇಣಿ : ರೂ 24,050 – ರೂ 64,480.

ವಿದ್ಯಾರ್ಹತೆ ಹಾಗೂ ವಯಸ್ಸಿನ ಅರ್ಹತೆಗಳು

* ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಅಂಗೀಕೃತ ವಿಶ್ವವಿದ್ಯಾಲಯ / ಸಂಸ್ಥೆಗಳು / ಬೋರ್ಡ್ ನಿಂದ ಪಡೆದಿರಬೇಕು.

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 26 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ

* ಆನ್‌ಲೈನ್ ಪರೀಕ್ಷೆ

* ಸಂದರ್ಶನ

* ಆನ್‌ಲೈನ್ ಪರೀಕ್ಷೆಗಳು ಬೆಂಗಳೂರು, ಚೆನ್ನೈ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತಾ, ಪುಣೆ, ಮಂಗಳೂರು, ಧಾರವಾಡ ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ನಡೆಯಲಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಖಾಲಿಯಿರುವ 750 ಭೂಮಾಪಕರ ಹುದ್ದೆಗೆ ನೇಮಕಾತಿ ಆರಂಭ, ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ

* ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ರೂ 700 ಅರ್ಜಿ ಶುಲ್ಕ ಹಾಗೂ ಎಸ್ ಸಿ / ಎಸ್ ಟಿ ಅಭ್ಯರ್ಥಿಗಳಿಗೆ ರೂ 600 ಅರ್ಜಿ ಶುಲ್ಕವಿರುತ್ತದೆ. ಅರ್ಜಿ ಪ್ರಕ್ರಿಯೆಯಲ್ಲಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಬೇಕು.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ನವೆಂಬರ್ 20, 2024

* ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ : ನವೆಂಬರ್ 30, 2024

* ಪರೀಕ್ಷೆಯ ತಾತ್ಕಾಲಿಕ ದಿನಾಂಕ: ಡಿಸೆಂಬರ್ 15, 2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:14 am, Wed, 27 November 24