Karnataka CET 2025: ವಿದ್ಯಾರ್ಥಿಗಳ ಗಮನಕ್ಕೆ…! ಸಿಇಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (CET) ದಿನಾಂಕಗಳನ್ನು ಘೋಷಿಸಿದೆ. ಪರೀಕ್ಷೆ ಏಪ್ರಿಲ್ 15 ರಿಂದ 17 ರವರೆಗೆ ನಡೆಯಲಿದೆ. ಕನ್ನಡ ಭಾಷಾ ಪರೀಕ್ಷೆ ಏಪ್ರಿಲ್ 15ಕ್ಕೆ ನಿಗದಿಯಾಗಿದೆ. ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ನಿರೀಕ್ಷೆಯಿದೆ. ವಿವಿಧ ವಿಷಯಗಳ ಪರೀಕ್ಷೆಗಳು ಏಪ್ರಿಲ್ 16 ಮತ್ತು 17 ರಂದು ನಡೆಯಲಿವೆ.

Karnataka CET 2025: ವಿದ್ಯಾರ್ಥಿಗಳ ಗಮನಕ್ಕೆ...!  ಸಿಇಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ
Karnataka Cet 2025
Edited By:

Updated on: Apr 05, 2025 | 12:21 PM

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸಿದೆ. ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಏಪ್ರಿಲ್ 18, ಶುಕ್ರವಾರ ಕ್ರಿಶನ್ ಧಾರ್ಮಿಕ ಹಬ್ಬವಾದ ಗುಡ್ ಫ್ರೈಡೇ ಇರುವುದರಿಂದ ಸರ್ಕಾರ ಪರೀಕ್ಷೆ ದಿನಾಂಕವನ್ನು ಬದಲಿಸಿದೆ.

ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸುವ ಸಿಇಟಿ ಪರೀಕ್ಷೆಗೆ ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನೀರಿಕ್ಷೆಯಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಎಂಜಿನಿಯರಿಂಗ್‌ನಲ್ಲಿ ಹಲವು ಉದ್ಯೋಗವಕಾಶ; ತಿಂಗಳಿಗೆ ಲಕ್ಷ ಲಕ್ಷ ಸಂಬಳ!

ಏಪ್ರಿಲ್ 15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು,ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮತ್ತು ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ. ಏಪ್ರಿಲ್ 16 ರಂದು 10:30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮರುದಿನ ಅಂದರೆ ಏಪ್ರಿಲ್ 17 ರಂದು ಬೆಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:51 am, Sat, 5 April 25