Karnataka CET 2026: ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ

2026ರ ಕರ್ನಾಟಕ CET ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, KEA ವತಿಯಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುತ್ತಿದೆ. ಈ ವರ್ಷ ದಾಖಲೆಯ ಸಂಖ್ಯೆಯ 3.3 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಡ್ರೆಸ್ ಕೋಡ್, ಎಲೆಕ್ಟ್ರಿಕ್ ಸಾಧನಗಳ ನಿಷೇಧ ಹಾಗೂ ಹೈಟೆಕ್ ಭದ್ರತೆ ಜಾರಿಗೊಳಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಮುನ್ನ ವಿದ್ಯಾರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಮಾರ್ಗಸೂಚಿಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳುವಂತೆ ಪ್ರಾಧಿಕಾರ ಮನವಿ ಮಾಡಿದೆ.

Karnataka CET 2026: ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ
ಕರ್ನಾಟಕ CET ಪರೀಕ್ಷೆ
Image Credit source: gemini ai

Updated on: Apr 22, 2026 | 11:48 AM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ರಾಜ್ಯಾದ್ಯಂತ ಇಂದಿನಿಂದ (ಏಪ್ರಿಲ್ 22) ಆರಂಭವಾಗುತ್ತಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯುತ್ತಿದೆ.

ಅಂಕಿ-ಅಂಶಗಳ ವಿವರ:

ಈ ವರ್ಷ ದಾಖಲೆಯ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 1,86,099 ಹುಡುಗಿಯರು ಮತ್ತು 1,44,380 ಹುಡುಗರು ಸೇರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ 163 ಕೇಂದ್ರಗಳಲ್ಲಿ 77,604 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

ಡ್ರೆಸ್ ಕೋಡ್​​ಗಾಗಿ ಅಧಿಕಾರಿಗಳ ನೇಮಕ:

ಪರೀಕ್ಷಾ ಇತಿಹಾಸದಲ್ಲೇ ಮೊದಲ ಬಾರಿಗೆ, ಉಡುಪಿನ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಉಂಟಾಗುವ ಗೊಂದಲ ನಿವಾರಿಸಲು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು 745 ಡ್ರೆಸ್ ಕೋಡ್ ಅಧಿಕಾರಿಗಳನ್ನು ಕೆಇಎ ನೇಮಿಸಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು:

  • ಉಡುಪು: ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆಗಳನ್ನು ಧರಿಸುವುದು ಕಡ್ಡಾಯ. ಕಾಲರ್ ಇಲ್ಲದ ಉಡುಪುಗಳಿಗೆ ಆದ್ಯತೆ ನೀಡಬೇಕು.
  • ಹುಡುಗರಿಗೆ ನಿರ್ಬಂಧ: ಕುರ್ತಾ-ಪೈಜಾಮ, ಜೀನ್ಸ್ ಪ್ಯಾಂಟ್ ಮತ್ತು ಶೂಗಳನ್ನು ಧರಿಸಿ ಬರುವುದನ್ನು ನಿಷೇಧಿಸಲಾಗಿದೆ. ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಲು ಸೂಚಿಸಲಾಗಿದೆ.
  • ಎಲೆಕ್ಟ್ರಾನಿಕ್ ಸಾಧನಗಳು: ಮೊಬೈಲ್, ಬ್ಲೂಟೂತ್, ಇಯರ್‌ಫೋನ್ ಸೇರಿದಂತೆ ಯಾವುದೇ ಗ್ಯಾಜೆಟ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವಂತಿಲ್ಲ.

ಪರೀಕ್ಷಾ ವೇಳಾಪಟ್ಟಿ:

  • ಏಪ್ರಿಲ್ 22: ಗಡಿಭಾಗ ಮತ್ತು ಇತರ ರಾಜ್ಯಗಳ ಅಭ್ಯರ್ಥಿಗಳು ಏಪ್ರಿಲ್ 22ರಂದು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ಸೇರಿದಂತೆ ಐದು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ಬರೆಯಲಿದ್ದಾರೆ.
  • ಏಪ್ರಿಲ್ 23: ಬೆಳಿಗ್ಗೆ ಭೌತಶಾಸ್ತ್ರ (Physics) ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ (Chemistry).
  • ಏಪ್ರಿಲ್ 24: ಬೆಳಿಗ್ಗೆ ಜೀವಶಾಸ್ತ್ರ (Biology) ಮತ್ತು ಮಧ್ಯಾಹ್ನ ಗಣಿತ (Mathematics).

ಹೈಟೆಕ್ ಭದ್ರತೆ:

ಪರೀಕ್ಷಾ ಅಕ್ರಮಗಳನ್ನು ತಡೆಯಲು ನೇಮಕಾತಿ ಪರೀಕ್ಷೆಗಳ ಮಾದರಿಯಲ್ಲೇ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ 745 ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಮಲ್ಲೇಶ್ವರಂನಲ್ಲಿರುವ ಕೆಇಎ ಕೇಂದ್ರ ಕಚೇರಿಯಿಂದ ನೇರ ವೆಬ್‌ಕಾಸ್ಟಿಂಗ್ ಮೂಲಕ ನಿಗಾ ಇರಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪರೀಕ್ಷಾ ವ್ಯವಸ್ಥೆಯ ಉಸ್ತುವಾರಿ ವಹಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ಮುನ್ನ ವಿದ್ಯಾರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಮಾರ್ಗಸೂಚಿಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳುವಂತೆ ಪ್ರಾಧಿಕಾರ ಮನವಿ ಮಾಡಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:29 am, Wed, 22 April 26

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us